ಡಾ. ಎಚ್. ಎಚ್. ನದಾಫ್ ಅವರಿಗೆ ಆತ್ಮೀಯ ಸನ್ಮಾನ
ಲೋಕದರ್ಶನ ವರದಿ
ಹುಬ್ಬಳ್ಳಿ 19: ಕರ್ನಾಟಕ ಬಯಲಾಟ ಕಲಾವಿದರ ಸಂಘದ ಧಾರವಾಡ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾದ ಜನಪದ ಹಾಗೂ ದೊಡ್ಡಾಟ ಪ್ರಸಾಧನ ಕಲಾವಿದ ಡಾ. ಎಚ್. ಎಚ್. ನದಾಫ್ ಅವರನ್ನು ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಡಾ. ನದಾಫ್ ಅವರಿಗೆ ಶಾಲು ಹೊದಿಸಿ, ಮಾಲಾರೆ್ಣ ಮಾಡಿ ಅಭಿನಂದಿಸಲಾಯಿತು. ರಂಗಭೂಮಿ ಹಾಗೂ ಬಯಲಾಟಗಳು ಇನ್ನಷ್ಟು ಹೆಚ್ಚಿನ ಸಂಖ್ಯೆಯಲ್ಲಿ ನಡೆಯುವಂತಾಗಲಿ ಎಂದು ಶುಭ ಹಾರೈಸಲಾಯಿತು.
ಕಾರ್ಯಕ್ರಮದಲ್ಲಿ ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಸೋಹನ ಸುರೇಶ ಹೊರಕೇರಿ, ಸುಜಯ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ಕಾರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಹಾಗೂ ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ, ಜಾನಪದ ಕಲಾವಿದ ಡಾ. ಎಚ್. ಎಚ್. ನದಾಫ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.