ಬಳ್ಳಾರಿ

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮೊಹಮ್ಮದ್ ಝುಬೇರ್‌

ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಎಡಿಸಿ ಮೊಹಮ್ಮದ್ ಝುಬೇರ್‌

ನುಲಿಯ ಚಂದಯ್ಯ, ಬ್ರಹ್ಮಶ್ರೀ ನಾರಾಯಣಗುರು, ಶ್ರೀಕೃಷ್ಣ ಜಯಂತಿ ಪೂರ್ವಭಾವಿ ಸಭೆ

ಬಳ್ಳಾರಿ 09: ಜಿಲ್ಲಾಡಳಿತ ವತಿಯಿಂದ ವಿವಿಧ ಮಹನೀಯರ ಜಯಂತಿಯ ಕಾರ್ಯಕ್ರಮಗಳನ್ನು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಹೇಳಿದರು. 

ನಗರದ ನೂತನ ಜಿಲ್ಲಾಡಳಿತ ಭವನ ಸಭಾಂಗಣದಲ್ಲಿ ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಶುಕ್ರವಾರ ಏರಿ​‍್ಡಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆ.19 ರಂದು ನುಲಿಯ ಚಂದಯ್ಯ ಜಯಂತಿ, ಆ.20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಮತ್ತು ಆ.26 ರಂದು ಶ್ರೀಕೃಷ್ಣ ಜಯಂತಿಯ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ, ಅಚ್ಚುಕಟ್ಟಾಗಿ ಆಯೋಜಿಸಲಾಗುವುದು. ಎಲ್ಲ ಸಮುದಾಯದವರು, ಸಂಘ-ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.ಆ.19 ರಂದು ನುಲಿಯ ಚಂದಯ್ಯ ಜಯಂತಿಯ ಅಂಗವಾಗಿ ಮೆರವಣಿಗೆ ನೆರವೇರಲಿದ್ದು, ಮೆರವಣಿಗೆಯು ಬೆಂಕಿಮಾರೆಮ್ಮ (ಬಂಡಿಮೋಟ್) ದೇವಸ್ಥಾನದಿಂದ ಬ್ರೂಸ್‌ಪೇಟೆ ಪೊಲೀಸ್ ಠಾಣೆ ಮುಂಭಾಗ, ಹೆಚ್‌.ಆರ್‌.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೂ ನಡೆಯಲಿದೆ.  

ಆ.20 ರಂದು ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವಿದ್ದು, ಮೆರವಣಿಗೆಯು ನಗರದ ಈಡಿಗ ವಸತಿ ನಿಲಯ ಮುಂಭಾಗದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಹೆಚ್‌.ಆರ್‌.ಗವಿಯಪ್ಪ ವೃತ್ತದಿಂದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದವರೆಗೂ ನಡೆಯಲಿದೆ. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಒಳಗೊಂಡಿರುತ್ತವೆ ಎಂದು ಅವರು ತಿಳಿಸಿದರು.ಆ.26 ರಂದು ಶ್ರೀಕೃಷ್ಣ ಜಯಂತಿಯು ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಲಾಗುತ್ತಿದ್ದು, ಶಿಷ್ಠಾಚಾರದಂತೆ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಗಣ್ಯರನ್ನು ಆಹ್ವಾನಿಸಬೇಕು ಎಂದು ತಿಳಿಸಿದ ಅವರು, ವೇದಿಕೆ ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಸ್ವಚ್ಛತೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ವೇದಿಕೆ ಕಾರ್ಯಕ್ರಮದಲ್ಲಿ ಗೀನಗಾಯನ, ಭಕ್ತಿಗೀತೆ ಕಾರ್ಯಕ್ರಮ ನಡೆಯಲಿದೆ. ಮಹನೀಯರ ಕುರಿತು ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಏರಿ​‍್ಡಸಬೇಕು.ನಂತರದಲ್ಲಿ ಲಘು ಉಪಾಹಾರ ವ್ಯವಸ್ಥೆ ಕೈಗೊಳ್ಳಬೇಕು ಎಂದು ಅವರು ಹೇಳಿದರು.ಸಭೆಯಲ್ಲಿ ಸಮುದಾಯದ ಮುಖಂಡರು ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ಹಾಗೂ ಯಶಸ್ವಿಗೊಳಿಸಲು ತಮ್ಮ ಅಭಿಪ್ರಾಯ ನೀಡಿದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಸಮುದಾಯದ ಮುಖಂಡರು ಹಾಗೂ ಇನ್ನಿತರರು ಉಪಸ್ಥಿತರಿದ್ದರು. 


ಸುದ್ದಿ ಓದಿ