ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ
ನಡುವೆ ಸಮತೋಲನ ಕಾಪಾಡಿಕೊಳ್ಳಲು ಸಾಧ್ಯ
ಧಾರವಾಡ 29: ಆಯುರ್ವೇದವು, ಪ್ರಾಚೀನ ಭಾರತೀಯ ವೈದ್ಯಕೀಯ ಪದ್ಧತಿಯನ್ನು ಗೌರವಿಸುತ್ತದೆ. ಸಮಗ್ರ ಯೋಗಕ್ಷೇಮ ಮತ್ತು ನೈಸರ್ಗಿಕ ಚಿಕಿತ್ಸೆಗೆ ಒತ್ತು ನೀಡುತ್ತದೆ. 2014 ರಿಂದ ಕೇಂದ್ರ ಸರ್ಕಾರ ಆಯುರ್ವೇದ ಇಲಾಖೆಗೆ ಒಂದು ಪ್ರತ್ಯೇಕವಾದ ಸ್ಥಾನಮಾನ ನೀಡಿದೆ. ಆಯುರ್ವೇದ
ಚಿಕಿತ್ಸಾ ವ್ಯವಸ್ಥೆಯು ದೇಹ, ಮನಸ್ಸು ಮತ್ತು ಆತ್ಮದ ನಡುವೆ ಸಮತೋಲನವನ್ನು ಕಾಯ್ದುಕೊಳ್ಳುವ ಮೂಲಕ ರೋಗಗಳನ್ನು ತಡೆಗಟ್ಟುವಲ್ಲಿ ಸಹಾಯ ಮಾಡುತ್ತದೆ ಎಂದು ಗುತ್ತಲ ಆಯುರ್ವೇದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಸ್.ಟಿ.ಹೊಂಬಾಳೆ ಅವರು ಹೇಳಿದರು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ, ಜಿಲ್ಲಾ ಆಯುಷ ಇಲಾಖೆಯ ಸಹಯೋಗದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಉದ್ಘಾಟಿಸಿ ಧನ್ವಂತರಿಯ ದೇವಿ ಭಾವಚಿತ್ರಕ್ಕೆ ಪುಷ್ಾರೆ್ಪಣ ಸಲ್ಲಿಸಿ, ಮಾತನಾಡಿದರು.
ಆಯುರ್ವೇದ ಚಿಕಿತ್ಸೆಯು ದೋಷಗಳನ್ನು ಸಮತೋಲನಗೊಳಿಸುವುದರ ಮೇಲೆ ಕೇಂದ್ರಿಕರಿಸುತ್ತದೆ. ಪ್ರಪಂಚದಾದ್ಯಂತ, ಆಯುಷ ಸಚಿವಾಲಯವು 28 ಅಕ್ಟೋಬರ್ 2016 ರಿಂದ ರಾಷ್ಟ್ರೀಯ ಆಯುರ್ವೇದ ದಿನವನ್ನು ಪ್ರಾರಂಭಿಸಿತು ಎಂದು ಹೇಳಿದರು.
ಆಯುರ್ವೇದ ಪೆಡರೇಶನ್ ಅಧ್ಯಕ್ಷ ಡಾ. ರವೀಂದ್ರ ವಾಯ್. ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ಮಾತನಾಡಿ, ಆಧುನಿಕ ಚಿಕಿತ್ಸಾ ಸಂಪ್ರದಾಯವು ವಿಭಿನ್ನವಾಗಿದೆ. ಪ್ರಾಚೀನ ಕಾಲದಲ್ಲಿ ಈ ಆಯುರ್ವೇದ ಓಷಧ ಹೆಚ್ಚು ಬೇಡಿಕೆಯಲ್ಲಿತ್ತು. ಆದರೆ ಇತ್ತೀಚಿನ ಕಾಲಮಾನದಲ್ಲಿ ವಿದೇಶಿ ಕಂಪನಿಗಳು ತಯಾರಿಸಿದ್ದ ಓಷಧಿಗಳ ಬಳಕೆಯಲ್ಲಿ ಎಲ್ಕರೂ ತೊಡಗಿದ್ದಾರೆ.
ಜನರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಆಯುರ್ವೇದದ ಬಗ್ಗೆ ಜಾಗೃತಿ ಮೂಡಿಸಬೇಕು. ಮತ್ತು ಇದರ ಉಪಯೋಗದ ಬಗ್ಗೆ ವಿವಿಧ ಕಾರ್ಯಕ್ರಮಗಳ ಮೂಲಕ ಜನರಿಗೆ ತಿಳಿಸಬೇಕು ಎಂದು ಅವರು ಹೇಳಿದರು.
ನಿವೃತ್ತ ಪ್ರಾಂಶುಪಾಲ ಡಾ.ಸಂಗಪ್ಪ ಕೊಟ್ಟೂರ ಮತ್ತು ಡಾ. ನೀತಾ ಜೋಗಿನ್ ಅವರು ಆಯುರ್ವೇದ ಓಷಧ ತಯಾರಿಕೆಯ ಉಪಯೋಗದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲಾ ಆಯುಷ್ ಆರೋಗ್ಯಾಧಿಕಾರಿ ಡಾ.ಗಣೇಶ ಕಬಾಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು, ಡಾ.ಶಂಕರ ಕೊಟ್ರೆ, ಮಹಿಳಾ ಪ್ರತಿನಿಧಿ ಡಾ.ಸವಿತಾ ಹುಣಸಿಮರದ, ಅಥರ್ವ ಮಹಾವಿದ್ಯಾಲಯದ
ಪ್ರಾಚಾರ್ಯ ಡಾ. ರಜನೀಶ್, ಮಹಾಗಣಪತಿ ವಿದ್ಯಾಲಯದ ಪ್ರಾಚಾರ್ಯ ಡಾ. ತೆಗ್ಗಿ ಹಾಗೂ ಆಯುರ್ವೇದ ವಿದ್ಯಾಲಯದ ವಿಧ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
********
ವಾವಿಸಂ: 723/96
ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ಬೆಳೆಗಳ ತೋಟಗಳ ಅಭಿವೃದ್ಧಿ ಪಡಿಸಲು ಅರ್ಜಿ ಆಹ್ವಾನ
ಧಾರವಾಡ 29: 2025-26 ನೇ ಸಾಲಿನ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಅಡಿಕೆ, ಬಾಳೆ, ತೆಂಗು, ಕರಿಬೇವು, ನಿಂಬೆ, ನುಗ್ಗೆ ಮತ್ತು ಇನ್ನಿತರೆ ತೋಟಗಾರಿಕೆ ಬೆಳೆಗಳ ಹೊಸ ತೋಟಗಳ ಅಭಿವೃದ್ಧಿ ಪಡಿಸಲು ಹಾಗೂ ಬದುವಿನ ಸುತ್ತ ತೆಂಗು ನೆಡಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಎಲ್ಲಾ ಸಾಮಾನ್ಯ ವರ್ಗದ ಸಣ ್ಣಹಿಡುವಳಿದಾರ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅಕ್ಟೋಬರ್ 30, 2024 ರೊಳಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಕಾರ್ಯಾಲಯ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿ.ಪಂ) ಕಲಘಟಗಿ ಕಛೇರಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08370-284468 ಗೆ ಸಂಪರ್ಕಿಸಬಹುದು ಎಂದು ಕಲಘಟಗಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
******
ವಾವಿಸಂ: 723/97
ಜಿಲ್ಲಾ ಪಂಚಾಯತ ಅತಿಥಿ ಗೃಹ ಆವರಣದಲ್ಲಿ ಅ. 29 ರಿಂದ ಅ. 30 ವರೆಗೆ ದೀಪಾವಳಿ ಹಬ್ಬದ ಪ್ರಯುಕ್ತ ಸ್ವ-ಸಹಾಯ ಸಂಘಗಳು ಉತ್ಪಾದಿಸುವ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜನೆ
ಧಾರವಾಡ 29: ದೀಪಾವಳಿ ಹಬ್ಬದ ಪ್ರಯುಕ್ತ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ (ಎನ್ಆರ್ಎಲ್ಎಂ) ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಸ್ವ-ಸಹಾಯ ಸಂಘದ ಸದಸ್ಯರುಗಳಿಂದ ತಯಾರಿಸಿದ ದೀಪಾವಳಿ ಹಬ್ಬದ ವಿಶೇಷ ತಿಂಡಿ-ತಿನಿಸುಗಳು ಹಾಗೂ ವಿವಿಧ ಅಲಂಕಾರಿಕ ಮಣ್ಣಿನ ಹಣತೆಗಳ ಮಳಿಗೆಗಳನ್ನೊಳಗೊಂಡ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಬರುವ ಅಕ್ಟೋಬರ್ 29 ರಿಂದ ಅಕ್ಟೋಬರ್ 30 ವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಅತಿಥಿ ಗೃಹ ಆವರಣದಲ್ಲಿ ಆಯೋಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
********
ನ. 1 ರಂದು ರಾಜ್ಯ ಹಾತ್ಕರ್ಗಾ ಕೈಮಗ್ಗ ಮೇಳ
ಧಾರವಾಡ 29: ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಹಾತ್ಕರ್ಗಾ ಕೈಮಗ್ಗ ಮೇಳ ವಸ್ತ್ರ ಭಂಡಾರವನ್ನು ನವೆಂಬರ್ 1 ರಂದು ಸಂಜೆ 4.30 ಗಂಟೆಗೆ ಡಿಸಿ ಕಂಪೌಂಡ ಹತ್ತಿರ ಇರುವ ದಿ. ಇನ್ಸ್ಟಿಟ್ಯೂಶನ್ ಆಫ್ ಇಂಜಿನಿಯರ್ಸದಲ್ಲಿ ಆಯೋಜಿಸಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಕಾರ್ಯಕ್ರಮ ಉದ್ಘಾಟಸುವರು.
ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ಅವರು ಮಳಿಗೆಗಳ ಉದ್ಘಾಟಿಸುವರು.
ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕ ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಜೆ.ಎನ್.ಗಣೇಶ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಎಚ್ ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶಟೆಂಗಿನಕಾಯಿ, ಎಂ.ಆರ್.ಪಾಟೀಲ್, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಹಾಗೂ ಕರ್ನಾಟಕ, ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾ ಮಂಡಳಿ ನಿಗಮದ ಅಧ್ಯಕ್ಷ ಬಿ. ಜೆ ಗಣೇಶ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಸಂಜಯ ಬಾ. ಶೆಟ್ಟೆನ್ನನವರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ಕೈಮಗ್ಗ ಮತ್ತು ಜವಳಿ ನಿರ್ದೇಶಕ ಹಾಗೂ ಜವಳಿ ಆಯುಕ್ತೆ ಕೆ.ಜ್ಯೋತಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ ಎಂ.ಬ್ಯಾಕೋಡ, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವರ್ನಿತ ನೇಗಿ, ಕೈಮಗ್ಗ ಮತ್ತು ಜವಳಿ ಇಲಾಖೆ ಪಶ್ಚಿಮ ವಿಭಾಗದ ಜಂಟಿ ನಿರ್ದೇಶಕ ಸಫಾರೆ ಶ್ರೀನಿವಾಸ, ಕೈಮಗ್ಗ ಮತ್ತು ಜವಳಿ ಇಲಾಖೆ ಕೇಂದ್ರ ಕಚೇರಿಯ
ಜಂಟಿ ನಿರ್ದೇಶಕ ಸುರೇಶಕುಮಾರ ಎ., ನೇಕಾರರ ಸೇವಾ ಕೇಂದ್ರದ ಸಹಾಯಕ ನಿರ್ದೇಶಕ ಮಾರಿಮುತ್ತು ಎಸ್, ಜಿಲ್ಲಾ ಕೈಗಾರಿಕಾ ಜಂಟಿ ನಿರ್ದೇಶಕ ಶಿವಪುತ್ರ್ಪ ಹೊಸಮನಿ ಅವರು ಭಾಗವಹಿಸುವರೆಂದು ಕೈಮಗ್ಗ ಮತ್ತು ಜವಳಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.