ಸಾರಿಗೆ ಸಂಸ್ಥೆಯ ಬಸ್ಸಿನ ಮೇಲೆ ಕಲ್ಲು ಎಸೆದ ಪ್ರಕರಣ : ಇಬ್ಬರು ಕಿಡಿಗೇಡಿಗಳ ಬಂಧನ

ಸಾರಿಗೆ ಸಂಸ್ಥೆಯ ಬಸ್ಸಿನ ಮೇಲೆ ಕಲ್ಲು ಎಸೆದ ಪ್ರಕರಣ : ಇಬ್ಬರು ಕಿಡಿಗೇಡಿಗಳ ಬಂಧನ

ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ಬಳಿ ಗುರುವಾರ ರಾತ್ರಿ ನಡೆದ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. 

     ಈ ಕಲ್ಲು ಎಸೆತ ಪ್ರಕರಣದಲ್ಲಿ ಪರಶುರಾಮ ನಾಯಿಕ ಮತ್ತು ಬಸವರಾಜ ಶಿಂಧೆ ಇವರಿಬ್ಬರು ಬಂಧಿತರಾಗಿದ್ದಾರೆ. ಗುರುವಾರ ರಾತ್ರಿ ಹುಕ್ಕೇರಿಯಿಂದ ಬೆಳಗಾವಿಗೆ ಹೊರಟ್ಟಿದ್ದ ಸಾರಿಗೆ ಸಂಸ್ಥೆಯ ಬಸ್ಸಿನ ಮೇಲೆ ಕಲ್ಲು ಎಸೆಯಲಾಗಿತ್ತು. 

   ಈ ಘಟನೆಯಲ್ಲಿ ಓರ್ವ ಪ್ರಯಾಣಿಕನಿಗೆ ಗಾಯವಾಗಿತ್ತು. ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಈ ಇಬ್ಬರನ್ನು ಬಂಧಿಸಲಾಗಿದೆ. 

ಸುದ್ದಿ ಓದಿ