ಹೂವು,ದೀಪಗಳ ನಡುವೆ ವಿದ್ಯಾರ್ಥಿಗಳ ಸಂಭ್ರಮದ ಸ್ವಾಗತ!
A celebratory welcome from students amidst flowers and lights!
ಲೋಕದರ್ಶನ ವರದಿ
ಮುಂಡಗೋಡ 01 : ತಾಲೂಕಿನ ಬೆಡಸಗಾಂವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಅರ್ಥಪೂರ್ಣ ಹಾಗೂ ವೈಶಿಷ್ಟ್ಯಪೂರ್ಣವಾಗಿ ಆಚರಿಸಲಾಯಿತು. ಶಾಲಾ ಆವರಣವನ್ನು ತೋರಣಗಳು ಮತ್ತು ಅಲಂಕಾರಗಳಿಂದ ಸಿಂಗರಿಸಲಾಗಿದ್ದು, ಪ್ರವೇಶ ದ್ವಾರದಲ್ಲಿ ಬಣ್ಣಬಣ್ಣದ ರಂಗೋಲಿ ಹಾಕಿ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಶಿಕ್ಷಕರು, ಪಾಲಕರು ಹಾಗೂ ಗ್ರಾಮಸ್ಥರು ದೀಪ ಬೆಳಗಿಸುವ ಮೂಲಕ ಮಕ್ಕಳಿಗೆ ಸ್ವಾಗತ ಕೋರಿದರು. ಪ್ರಾರಂಭೋತ್ಸವದ ಅಂಗವಾಗಿ ಪಾಲಕ-ಪೋಷಕರ ಮಹಾಸಭೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು. ಶಾಲೆಯ ಅಭಿವೃದ್ಧಿ, ಮಕ್ಕಳ ಶೈಕ್ಷಣಿಕ ಪ್ರಗತಿ ಹಾಗೂ ಪಾಲಕರ ಸಹಭಾಗಿತ್ವ ಕುರಿತು ಚರ್ಚೆ ನಡೆಸಲಾಯಿತು.
ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆಗಾಗಿ ಶಾಲೆ, ಮನೆ ಹಾಗೂ ಸಮಾಜ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕೆಂಬ ಸಂದೇಶವನ್ನು ಕಾರ್ಯಕ್ರಮ ಸಾರಿತು. “ಉತ್ತಮ ಕಲಿಕೆ ಹಿ ಉಜ್ವಲ ಭವಿಷ್ಯ” ಎಂಬ ಧ್ಯೇಯದೊಂದಿಗೆ ಹೊಸ ಶೈಕ್ಷಣಿಕ ವರ್ಷವನ್ನು ಆರಂಭಿಸಿದ ಶಾಲೆಯು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಸಂಕಲ್ಪವನ್ನು ವ್ಯಕ್ತಪಡಿಸಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಹೊಸ ಉತ್ಸಾಹ ಮತ್ತು ಆತ್ಮವಿಶ್ವಾಸದೊಂದಿಗೆ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಭರವಸೆ ಮೂಡಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಪಾಲಕ-ಪೋಷಕರು, ಶಿಕ್ಷಕರ ವೃಂದ, ಊರಿನ ಸಾರ್ವಜನಿಕರು ಹಾಗೂ ಬಿಸಿಯೂಟ ಸಹಾಯಕಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 