ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಬೀಫ್ ರಫ್ತು ಕಂಪನಿಗಳ ಪರವಾನಗಿ ರದ್ದಿಗೆ ಕೊಪ್ಪಳದಲ್ಲಿ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ" ನಕಲಿ ಗೋ ರಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಮುಸ್ಲಿಮ್ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಒತ್ತಾಯ

ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ, ಬೀಫ್ ರಫ್ತು ಕಂಪನಿಗಳ ಪರವಾನಗಿ ರದ್ದಿಗೆ ಕೊಪ್ಪಳದಲ್ಲಿ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ"    ನಕಲಿ ಗೋ ರಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಮುಸ್ಲಿಮ್ ಹಾಗೂ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಒತ್ತಾಯ A coalition of Muslim organizations in Koppal demands that the cow be declared the national animal a

ಕೊಪ್ಪಳ 30:  ಭಾರತೀಯ ಸಂಸ್ಕೃತಿಯಲ್ಲಿ ಅತ್ಯುನ್ನತ ಹಾಗೂ ಪವಿತ್ರ ಸ್ಥಾನ ಹೊಂದಿರುವ ಗೋವನ್ನು ದೇಶದ ‘ರಾಷ್ಟ್ರೀಯ ಪ್ರಾಣಿ’ ಎಂದು ಅಧಿಕೃತವಾಗಿ ಘೋಷಿಸಬೇಕು ಮತ್ತು ವಿದೇಶಗಳಿಗೆ ದೊಡ್ಡ ಪ್ರಮಾಣದಲ್ಲಿ ಗೋಮಾಂಸ (ಬೀಫ್) ರಫ್ತು ಮಾಡುತ್ತಿರುವ ಕಂಪನಿಗಳ ಪರವಾನಗಿಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಮತ್ತು ಪ್ರಗತಿಪರ ಸಂಘಟನೆಗಳ ಹಾಗೂ ರೈತ ಸಂಘಟನೆ ನೇತೃತ್ವದಲ್ಲಿ ಶುಕ್ರವಾರ ನಗರದ ಅಶೋಕ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಘೋಷಣೆಗಳನ್ನು ಕೂಗಲಾಯಿತು.   ಬಳಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಕಛೇರಿಯ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರ ಅವರ ಮುಖಾಂತರ ದೇಶದ ಗೌರವಾನ್ವಿತ ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳಿಗೆ ಜಂಟಿ ಮನವಿ ಪತ್ರವನ್ನು ಸಲ್ಲಿಸಲಾಯಿತು.