ಹಗರಿಬೊಮ್ಮನಹಳ್ಳಿ

ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಸಂವಾದ ಕಾರ್ಯಕ್ರಮ

ಕೇಂದ್ರ ಸಾಹಿತ್ಯ ಅಕಾಡೆಮಿಯಿಂದ ಸಂವಾದ ಕಾರ್ಯಕ್ರಮ

ಹಗರಿಬೊಮ್ಮನಹಳ್ಳಿ 29: ನಗರದ ಜಿವಿಪಿಪಿ ಸರಕಾರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಕನ್ನಡ ವಿಭಾಗ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಸಂವಾದ ಕಾರ್ಯಕ್ರಮ ಜರುಗಿತು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿವಿಪಿಪಿ ಕಾಲೇಜಿನ ಪ್ರಾಂಶುಪಾಲ ಕೆ. ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ಕನ್ನಡಪರ ಕಾಳಜಿಯನ್ನು ಹೆಚ್ಚಿಸಿಕೊಂಡು ಸೃಜನಶೀಲ ಬರವಣಿಗೆಯನ್ನು ರೂಡಿಸಿಕೊಳ್ಳಬೇಕು. ಬರವಣಿಗೆಯಲ್ಲಿ ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಎಂದು ತಿಳಿಸಿದರು. 

ಈ ವೇಳೆ ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಾಳಸಾಹೇಬ್ ಲೋಕಾಪುರ ಮಾತನಾಡಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸಾಹಿತ್ಯ ಅಕಾಡೆಮಿಯನ್ನು ಸಮರ​‍್ಕವಾಗಿ ಬಳಸಿಕೊಳ್ಳಬೇಕು ಕೇಂದ್ರ ಸಾಹಿತ್ಯ ಅಕಾಡೆಮಿ ಗ್ರಾಮೀಣ ಪ್ರದೇಶದಲ್ಲಿ ಸಾಹಿತ್ಯಿಕ ವಾತಾವರಣ ಪಸರಿಸಲು ಶ್ರಮಿಸುತ್ತಿದೆ ಎಂದು ತಿಳಿಸಿದರು. 

ಡಾ. ವೆಂಕಟಗಿರಿ ದಳವಾಯಿ ಮಾತನಾಡಿ, ಒಡಲಾಳದ ಸಾಕವ್ವನ ಸಂಕಟಗಳು ನಮ್ಮೆಲ್ಲರ ಬವಣೆಗಳೂ ಹೌದು. ಒಡಲಾಳ ಕಾದಂಬರಿಯು, ಹಸಿವನ್ನು ಪ್ರಧಾನವಾಗಿಟ್ಟುಕೊಂಡ ಕಾದಂರಿಯಾದರೂ ಅದರಾಚೆಗೆ ಇಡೀ ವ್ಯವಸ್ಥೆಯನ್ನು ಪ್ರತಿನಿಧಿಸುತ್ತದೆ. ಈ ಕೃತಿಯು ಸರ್ವಕಾಲದಲ್ಲೂ ಹೊಸಹೊಸ ಅರ್ಥವನ್ನು ಕೊಡುತ್ತದೆ ಎಂದು ತಿಳಿಸಿದರು. 

ಸಂವಾದದಲ್ಲಿ ಡಾ.ಸತೀಶ್ ಪಾಟೀಲ್, ಡಾ.ಮಲ್ಲಿಕಾರ್ಜುನ, ಡಾ.ಅಕ್ಕಿ ಬಸವೇಶ್, ಸೋಮೇಶ್ ಉಪ್ಪಾರ, ಡಾ.ಗುರುಪ್ರಸಾದ್ ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಉಪನ್ಯಾಸಕ ಡಾ.ಜೋಗಿನಕಟ್ಟಿ ನಾಗರಾಜ ನಿರ್ವಹಿಸಿದರು. 


ಸುದ್ದಿ ಓದಿ