ಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆ

ಬರೀ ಪದವಿ ಸಾಲದು, ಪ್ರಾಯೋಗಿಕ ಕೌಶಲ್ಯ ಬೆಳೆಸಿಕೊಂಡು ಸ್ವಾವಲಂಬಿಗಳಾಗಿ: ಯುವ ಇಂಜಿನಿಯರ್ಗಳಿಗೆ ಪತ್ರಕರ್ತ ಅಜಿತ್ ಹನಮಕ್ಕನವರ ಕರೆ A degree alone is not enough, develop practical skills and become self-reliant: Journalist Ajith Han

ಬೆಳಗಾವಿ 06 :  ಇಂದಿನ  ಸ್ಪರ್ಧಾತ್ಮಕ ಜಗತ್ತಿನಲ್ಲಿ  ಯುವಕರು ಉದ್ಯೋಗಕ್ಕಾಗಿ ಅಲೆದಾಡಿ ಸಮಯ ವ್ಯರ್ಥ ಮಾಡದೇ,  ಇಂಜಿನಿಯರಿಂಗ್ ಶಿಕ್ಷಣದಲ್ಲಿ ಪಡೆದ ತಾಂತ್ರಿಕ ಜ್ಞಾನ ಮತ್ತು ಕೌಶಲ್ಯಗಳನ್ನು ಸರಿಯಾಗಿ ಬಳಸಿಕೊಂಡು ಸ್ವಾವಲಂಬಿಗಳಾಗಬೇಕು ಹಾಗೂ ಹೊಸ ಆವಿಷ್ಕಾರಗಳತ್ತ ಗಮನಹರಿಸಬೇಕು ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ವಾಹಿನಿಯ ಮುಖ್ಯ ಸಂಪಾದಕರಾದ ಅಜಿತ್ ಹನಮಕ್ಕನವರ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಬೆಳಗಾವಿಯ ಉದ್ಯಮಬಾಗದಲ್ಲಿರುವ ಪ್ರಸಿದ್ಧ ತಾಂತ್ರಿಕ ಸಂಸ್ಥೆಯಾದ ಜೈನ್ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ರಿಸರ್ಚ್‌ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಘಟೀಕೋತ್ಸವ ಮತ್ತು ಪದವಿ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.ಉದ್ಯೋಗ ಆಕಾಂಕ್ಷಿಗಳಾಗಬೇಡಿ, ಉದ್ಯೋಗದಾತರಾಗಿ:

"ಇಂದಿನ ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ  ಯಂತಹ ತಂತ್ರಜ್ಞಾನಗಳು ವೇಗವಾಗಿ ಬೆಳೆಯುತ್ತಿವೆ.  ಪ್ರಸ್ತುತ ದಿನಗಳಲ್ಲಿ ಉದ್ಯೋಗ ಮಾರುಕಟ್ಟೆ ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ತಮ್ಮ ಕೌಶಲ್ಯಗಳನ್ನು ಸದಾ ಅಪ್ಡೇಟ್ ಮಾಡಿಕೊಳ್ಳುತ್ತಿರಬೇಕು. ಕೇವಲ ಪದವಿ ಪ್ರಮಾಣಪತ್ರಗಳನ್ನು ಕೈಯಲ್ಲಿ ಹಿಡಿದು ಉದ್ಯೋಗಕ್ಕಾಗಿ ಅಲೆಯುವ ಆಕಾಂಕ್ಷಿಗಳಾಗುವ ಬದಲು, ನೀವೇ ನಾಲ್ಕು ಜನರಿಗೆ ಕೆಲಸ ಕೊಡುವ ಉದ್ಯೋಗದಾತರಾಗಿ ಬೆಳೆಯುವ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು" ಎಂದು ಕಿವಿಮಾತು ಹೇಳಿದರು.ಈ ಕಾಲೇಜಿನಲ್ಲಿ ಮದ್ಯಮ ವರ್ಗದ ಮಕ್ಕಳು  ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವುದು ಅತೀವ ಸಂತೋಷವಾಗಿದೆ.   ಮನುಷ್ಯನಿಗೆ ಸಮಯ ಮುಖ್ಯ. ಸಮಯ ತಕ್ಕಂತೆ ನಾವು ಸಾಗಿದಾಗ ಜೀವನದಲ್ಲಿ ಯಶಸ್ಸು  ಪಡೆಯಲು ಸಾಧ್ಯ ಎಂದರು. ಪೋಷಕರ  ಕನಸಿನಂತೆ ಯುವಕರು ಜೀವನದಲ್ಲಿ ಉನ್ನತ ಮಟ್ಟಕ್ಕೆ ಬೆಳೆಯಬೇಕು.