ಕಗದಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ

ಕಗದಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ A festive school commencement ceremony at the Government High School in Kagdala village

ಸವದತ್ತಿ 03 : ತಾಲೂಕಿನ ಕಗದಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರದಂದು ಶಾಲಾ ಪ್ರಾರಂಭೋತ್ಸವವನ್ನು ಅತ್ಯಂತ ಸಂಭ್ರಮ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಶಿಕ್ಷಕ ಆರಿ​‍್ಸ. ರಾಠೋಡ, ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದೊಂದಿಗೆ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಬಿಸಿಯೂಟದಂತಹ ಸೌಲಭ್ಯಗಳನ್ನು ಉಚಿತವಾಗಿ ನೀಡುತ್ತಿದೆ. ಅರ್ಹ ಮತ್ತು ಅನುಭವಿ ಶಿಕ್ಷಕರಿಂದ ಇಲ್ಲಿ ಬೋಧನೆ ನಡೆಯುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಶಾಲೆ ಪ್ರಾರಂಭದ ದಿನದಿಂದಲೇ ಕಳುಹಿಸುವ ಮೂಲಕ ಶೈಕ್ಷಣಿಕ ಪ್ರಗತಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.ಕಾರ್ಯಕ್ರಮದ ಆರಂಭದಲ್ಲಿ ಸರಸ್ವತಿ ಪೂಜೆ ನೆರವೇರಿಸಲಾಯಿತು. ನಂತರ ಸಸಿಗೆ ನೀರು ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ ಕೋರಲಾಯಿತು.

ಈ ವೇಳೆ ಮಕ್ಕಳಿಗೆ ಉಚಿತ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಯಿತು. ಸಿಹಿ ಹಂಚುವ ಮೂಲಕ ಶಾಲೆಯ ಬಿಸಿಯೂಟ ಕಾರ್ಯಕ್ರಮಕ್ಕೂ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಶಿಕ್ಷಕರಾದ ಎಸ್‌.ವಿ. ಶೆಟ್ಟರ್ ಮತ್ತು ಬಿ.ಜಿ. ಪಾಟೀಲ್ ಅವರು ಶಾಲೆಯಲ್ಲಿರುವ ಸೌಲಭ್ಯಗಳು, ಸರ್ಕಾರದ ವಿವಿಧ ಯೋಜನೆಗಳು ಹಾಗೂ ಶಾಲೆಯಲ್ಲಿ ನಡೆಯುವ ಶೈಕ್ಷಣಿಕ ಚಟುವಟಿಕೆಗಳ ಕುರಿತು ಪೋಷಕರಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಪಾಲಕರು, ಸುಧೀರ ವಾಗೇರಿ, ಎಮ್‌.ಎನ್‌. ಕರಡಿಗುಡ್ಡ, ಕುಂಬಾರ, ಜೆ.ಕೆ. ಪಾಟೀಲ್, ಎಚ್‌.ಎನ್‌. ಯಡ್ರಾವಿ, ಬಿ.ಎಸ್‌. ಜೋತೆನ್ನವರ, ಡಿ.ಬಿ. ಕೊಡ್ಲಿ ಸೇರಿದಂತೆ ಶಾಲೆಯ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.