ವಿಧಾನ ಪರಿಷತ್ ಸದಸ್ಯ ಚೆನ್ನರಾಜ ಹಟ್ಟಿಹೊಳಿ ಜನ್ಮದಿನಕ್ಕೆ ಅಭಿಮಾನಿಗಳು, ಕಾರ್ಯಕರ್ತರಿಂದ ಅದ್ಧೂರಿ ಶುಭಾಶಯಗಳ ಮಹಾಪೂರ
ಬೆಳಗಾವಿ 20: ವಿಧಾನ ಪರಿಷತ್ ಸದಸ್ಯ ಚನ್ನರಾಜ ಬಸವರಾಜ ಹಟ್ಟಿಹೊಳಿ ಅವರ ಜನ್ಮದಿನದ ಅಂಗವಾಗಿ ಶುಭ ಹಾರೈಸಲು ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು, ಅಧಿಕಾರಿಗಳು, ಸ್ನೇಹಿತರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಸಂಭ್ರಮದಿಂದ ಶುಭ ಕೋರಿದರು.
ಬೆಳಗ್ಗೆಯಿಂದಲೇ ಜನ್ಮದಿನದ ಶುಭಾಶಯ ಸಲ್ಲಿಸಲು ಆಗಮಿಸಿದವರ ಸಂಖ್ಯೆ ಹೆಚ್ಚಾಗಿದ್ದು, ಭೇಟಿಯಾಗಿ ಹೂಗುಚ್ಛ ನೀಡಿ, ಸಿಹಿ ತಿನಿಸಿ, ಆತ್ಮೀಯವಾಗಿ ಶುಭ ಹಾರೈಸಿದರು. ಯುವಕರು, ಅಭಿಮಾನಿಗಳು ಹಾಗೂ ಕಾರ್ಯಕರ್ತರ ಉತ್ಸಾಹ ಜನ್ಮದಿನದ ಆಚರಣೆಗೆ ವಿಶೇಷ ಕಳೆ ತಂದಿತು.
ವಿವಿಧ ಭಾಗಗಳಿಂದ ಆಗಮಿಸಿದ ಹಿತೈಷಿಗಳು ಚನ್ನರಾಜ ಹಟ್ಟಿಹೊಳಿ ಅವರಿಗೆ ಶುಭ ಹಾರೈಸಿ, ಅವರ ಮುಂದಿನ ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ಜೀವನ ಇನ್ನಷ್ಟು ಯಶಸ್ವಿಯಾಗಲಿ ಎಂದು ಆಶಿಸಿದರು.
ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಹಲವು ಗಣ್ಯರು, ಮುಖಂಡರು ಉಪಸ್ಥಿತರಿದ್ದು, ಚನ್ನರಾಜ ಹಟ್ಟಿಹೊಳಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದರು. ಕುಟುಂಬ ಸದಸ್ಯರು, ಆತ್ಮೀಯರು ಹಾಗೂ ಬೆಂಬಲಿಗರ ಸಮ್ಮುಖದಲ್ಲಿ ಜನ್ಮದಿನದ ಸಂಭ್ರಮ ಮನೆಮಾಡಿತ್ತು.
ಜನರೊಂದಿಗೆ ಬೆರೆಯುವ ಸರಳ ಸ್ವಭಾವ, ಸ್ನೇಹಪರ ನಡೆ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಗುಣದಿಂದ ಚನ್ನರಾಜ ಹಟ್ಟಿಹೊಳಿ ಅವರು ಅಭಿಮಾನಿಗಳೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದಾರೆ. ಜನ್ಮದಿನದಂದು ಆಗಮಿಸಿದ ಅಪಾರ ಸಂಖ್ಯೆಯ ಜನರು ಅವರ ಮೇಲಿರುವ ಪ್ರೀತಿ, ವಿಶ್ವಾಸ ಹಾಗೂ ಅಭಿಮಾನವನ್ನು ಮತ್ತೊಮ್ಮೆ ವ್ಯಕ್ತಪಡಿಸಿದರು.
ಶುಭಾಶಯಗಳ ಮಹಾಪೂರದ ನಡುವೆ ಚನ್ನರಾಜ ಹಟ್ಟಿಹೊಳಿ ಅವರು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ, ತಮ್ಮ ಮೇಲಿಟ್ಟಿರುವ ಪ್ರೀತಿ, ವಿಶ್ವಾಸ ಹಾಗೂ ಆಶೀರ್ವಾದವೇ ಮುಂದಿನ ಸಾರ್ವಜನಿಕ ಸೇವಾ ಕಾರ್ಯಗಳಿಗೆ ಪ್ರೇರಣೆ ಎಂದು ಭಾವಪೂರ್ಣವಾಗಿ ಪ್ರತಿಕ್ರಿಯಿಸಿದರು.
ಜನ್ಮದಿನದ ಆಚರಣೆ ಕೇವಲ ವೈಯಕ್ತಿಕ ಸಂಭ್ರಮವಾಗಿರದೆ, ಅಭಿಮಾನಿಗಳು, ಕಾರ್ಯಕರ್ತರು, ಸ್ನೇಹಿತರು ಹಾಗೂ ಹಿತೈಷಿಗಳೊಂದಿಗೆ ಬೆಸೆಯುವ ಆತ್ಮೀಯ ಕ್ಷಣವಾಗಿ ಮೂಡಿಬಂತು.ನಂತರ, ಚನ್ನರಾಜ ಹಟ್ಟಿಹೊಳಿ ಹಿಂಡಲಗಾ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು.