ಮುಖ್ಯಗುರುಮಾತೆ ಬನಶಂಕರಿ ಎಸ್. ಅಂಕದ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ
A heartfelt farewell to Headmistress Banashankari S. Ankada
ತಾಳಿಕೋಟಿ 2: ತಾಲೂಕಿನ ಬಿ. ಸಾಲವಾಡಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಮಾತೆ ಬನಶಂಕರಿ ಎಸ್. ಅಂಕದ ಅವರು ಜುಲೈ 31ರಂದು ಸೇವೆಯಿಂದ ನಿವೃತ್ತರಾದ ಹಿನ್ನೆಲೆಯಲ್ಲಿ ಶಾಲೆಯ ವತಿಯಿಂದ ಆತ್ಮೀಯ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಅಧ್ಯಕ್ಷರು, ಗ್ರಾಮದ ಹಿರಿಯರು, ಶಿಕ್ಷಕರು, ಸಿಬ್ಬಂದಿ, ಬಂಧುಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಬನಶಂಕರಿ ಅಂಕದ ಅವರ ದೀರ್ಘಕಾಲದ ಶೈಕ್ಷಣಿಕ ಸೇವೆಯನ್ನು ಸ್ಮರಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ನಿವೃತ್ತ ಮುಖ್ಯಗುರುಮಾತೆ ಬನಶಂಕರಿ ಎಸ್. ಅಂಕದ ಅವರು ಶಾಲೆಯ ಎಲ್ಲ ವಿದ್ಯಾರ್ಥಿಗಳಿಗೆ ನೋಟ್ಬುಕ್, ಪೆನ್ನು ಹಾಗೂ ಸಿಹಿತಿಂಡಿಗಳನ್ನು ವಿತರಿಸಿ ಶುಭ ಹಾರೈಸಿದರು.
ಸಮಾರಂಭದಲ್ಲಿ ಮಾತನಾಡಿದ ಗಣ್ಯರು, ಬನಶಂಕರಿ ಅಂಕದ ಅವರ ಶಿಸ್ತು, ಕರ್ತವ್ಯನಿಷ್ಠೆ ಹಾಗೂ ವಿದ್ಯಾರ್ಥಿಗಳ ಮೇಲಿನ ಕಾಳಜಿಯನ್ನು ಶ್ಲಾಘಿಸಿ, ನಿವೃತ್ತ ಜೀವನವು ಆರೋಗ್ಯ, ಶಾಂತಿ ಮತ್ತು ನೆಮ್ಮದಿಯಿಂದ ಕೂಡಿರಲೆಂದು ಹಾರೈಸಿದರು. ಜೊತೆಗೆ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿರುವ ಅಮೂಲ್ಯ ಸೇವೆಗೆ ಕೃತಜ್ಞತೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 