32 ವರ್ಷಗಳ ಸುದೀರ್ಘ, ಮಾದರಿ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಅಧಿಕಾರಿ ಕೆ.ಕೆ ಚವ್ಹಾಣ ಅವರಿಗೆ ಆತ್ಮೀಯ ಬೀಳ್ಕೊಡುಗೆ
A heartfelt farewell to senior officer K.K. Chavan, who retired after 32 years of long and exemplary
ಲೋಕದರ್ಶನ ವರದಿ
ವಿಜಯಪುರ 31 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಸುಮಾರು 32 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ. ಕೆ. ಚವ್ಹಾಣ ಅವರಿಗೆ ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮೊಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ವಿವಿಧ ಇಲಾಖೆ ಅಧಿಕಾರಿ, ಸಿಬ್ಬಂದಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಆತ್ಮೀಯವಾಗಿ ಸನ್ಮಾನಿಸಿ, ಶುಭ ಹಾರೈಸಿದರು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು, ಸೇವಾ ನಿವೃತ್ತಿ ಹೊಂದುತ್ತಿರುವ ಕೆ. ಕೆ. ಚವ್ಹಾಣ ಅವರು ಸಂಘಟಿತ ಆಡಳಿತ ಮತ್ತು ಎಲ್ಲರನ್ನೂ ಒಳಗೊಳ್ಳುವ ಅದ್ಭುತ ಸ್ವಭಾವವನ್ನು ಹೊಂದಿದ್ದರು.
ಎಂತಹ ಕೆಲಸದ ಒತ್ತಡದ ಕ್ಲಿಷ್ಟಕರ ಹಾಗೂ ಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಅಧೀನ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಕಾರ್ಯ ನಿರ್ವಹಣೆಯನ್ನು ಸುಗಮಗೊಳಿಸುತ್ತಿದ್ದರು. ಅತ್ಯಂತ ಸೌಮ್ಯ ಸ್ವಭಾವದೊಂದಿಗೆ ಕಾನೂನು ಪರಿಪಾಲನೆಗೆ ಆದ್ಯತೆ ನೀಡಿ, ಅವರ ಕಾರ್ಯವೈಖರಿ ನಿಜಕ್ಕೂ ಮೆಚ್ಚುವಂತದ್ದು ಎಂದು ಶ್ಲಾಘಿಸಿದರು. ಅಲ್ಲದೆ, ಅವರ ವಿಶ್ರಾಂತ ಜೀವನವು ಅತ್ಯಂತ ಸುಖಮಯ ಹಾಗೂ ಆರೋಗ್ಯಪೂರ್ಣವಾಗಿರಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ಆತ್ಮೀಯ ಸನ್ಮಾನ ಸ್ವೀಕರಿಸಿ ಮಾತನಾಡಿದ ಕೆ.ಕೆ. ಚವ್ಹಾಣ ಅವರು, ನನ್ನ ಸುದೀರ್ಘ ವೃತ್ತಿ ಜೀವನದಲ್ಲಿ ಇಲಾಖೆಯ ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಹೆಗಲಿಗೆ ಹೆಗಲು ಕೊಟ್ಟು ಸಹಕರಿಸಿದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಸಹಕಾರ ಅನನ್ಯವಾದದ್ದು.ಈ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದು ನನ್ನ ಬದುಕಿನಲ್ಲಿ ಅತ್ಯಂತ ಖುಷಿ ತಂದಿದೆ ಎಂದು ಭಾವನಾತ್ಮಕವಾಗಿ ತಮ್ಮ ವೃತ್ತಿ ಜೀವನದ ದಿನಗಳನ್ನು ಮೆಲುಕು ಹಾಕಿದರು.
ಜಿಲ್ಲಾ ನಿರೂಪಣಾಧಿಕಾರಿಗಳಾದ ಶ್ರೀಮತಿ ನಿರ್ಮಲಾ ಸುರಪುರ ಅವರು ಕಾರ್ಯಕ್ರಮದ ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳೊಂದಿಗೆ ಕೆ. ಕೆ. ಚವ್ಹಾಣ ಅವರ ಸುದೀರ್ಘ ಸೇವೆಯನ್ನು ಸ್ಮರಿಸಿ, ಕಿರು ಪರಿಚಯ ಮಾಡಿಕೊಟ್ಟರು. ಈ ಸಮಾರಂಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ, ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಮುಖ್ಯ ಯೋಜನಾ ನಿರ್ದೇಶಕರಾದ ಸಿ.ಬಿ ಕುಂಬಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ. ದೀಪಾ ಕಾಳೆ, ಕ್ರೀಡಾಧಿಕಾರಿ ರಾಜಶೇಖರ ಧೈವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ವಾರ್ತಾಧಿಕಾರಿ ಅಮರೇಶ ದೊಡಮನಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೀಪಾಕ್ಷಿ ಜಾನಕಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಬಸವರಾಜ ಜಿಗಳೂರ, ಗೀತಾ ಗುತ್ತರಗಿಮಠ, ಎಸ್‌ಸಿ ಮ್ಯಾಗೇರಿ, ಶಿವಕುಮಾರ್ ಕುಂಬಾರ, ಸಾಹೇಬ್ ಗೌಡ, ಅನಿಲ್ ಹಳ್ಳಿ ಹಾಗೂ ಶಿಲ್ಪಾ ಹಿರೇಮಠ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧುಕಾರಿ, ಸಿಬ್ಬಂದಿ, ವಿವಿಧ ಸರ್ಕಾಕಾರೇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 