ಕೌಶಲ್ಯ ಪ್ರದರ್ಶನಕ್ಕೆ ಕಲಿಕಾ ಹಬ್ಬ ಉತ್ತಮ ವೇದಿಕೆ
ತಾಳಿಕೋಟಿ: ಮಕ್ಕಳಲ್ಲಿ ಸುಪ್ತವಾಗಿರುವ ಹಲವಾರು ಅಮೂಲ್ಯ ಕೌಶಲ್ಯಗಳನ್ನು ಹೊರತರಲು ಕಲಿಕಾಹಬ್ಬ ಕಾರ್ಯಕ್ರಮ ಅತ್ಯುತ್ತಮವಾದ ವೇದಿಕೆಯಾಗಿದೆ ಎಂದು ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಎ.ಬಿ. ಸಜ್ಜನ್ ಹೇಳಿದರು.
ಸೋಮವಾರ ಪಟ್ಟಣದ ಎಮ್.ಪಿ.ಎಸ್. ಶಾಲೆಯಲ್ಲಿ ಕ್ಷೇತ್ರಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮುದ್ದೇಬಿಹಾಳ ಹಾಗೂ ಸಮೂಹ ಸಂಪನ್ಮೂಲ ಕೇಂದ್ರ ತಾಳಿಕೋಟಿ ಇವರ ಸಹಯೋಗದಲ್ಲಿ ತಾಳಿಕೋಟಿ ಕ್ಲಸ್ಟರ್ ಮಟ್ಟದ ಕಲಿಕಾಹಬ್ಬ 2022-23 ರ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಮಕ್ಕಳಿಗೆ ನಿತ್ಯದ ಬದುಕಿನಲ್ಲಿ ಶಾಲೆಯಲ್ಲಿ ಪಾಠಕ್ಕೆ ಎಷ್ಟು ಮಹತ್ವ ಕೊಡುತ್ತೇವೆಯೋ ಅಷ್ಟೇ ಪ್ರಾಮುಖ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೂ ಕೊಡಬೇಕಾಗಿದೆ ಎಂದರು. ಕ್ಷೇತ್ರ ಸಮನ್ವಯಾಧಿಕಾರಿ ಯು.ಬಿ. ಧರಿಕಾರ ಮಾತನಾಡಿ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿ ಅವರಿಗೆ ಸರಿಯಾದ ಮಾರ್ಗದರ್ಶನ ಮಾಡಿದರೆ ಭವಿಷ್ಯದಲ್ಲಿ ಈ ಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸಾಧನೆ ಮಾಡಬಹುದು ನಮ್ಮ ಶಿಕ್ಷಕರು ಈ ಕುರಿತು ಆಸಕ್ತಿವಹಿಸಬೇಕಾಗಿದೆ ಎಂದರು.
್ಲ ಶಿಕ್ಷಣ ಸಂಯೋಜಕ ಎಸ್.ಎಸ್. ಹಿರೇಮಠ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಕೆ.ಎಸ್. ಸಜ್ಜನ್ ತಾಳಿಕೋಟಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಬಿ.ಎ. ವಿಜಾಪೂರ, ತಾಳಿಕೋಟಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಎ.ಎಲ್. ಆಲಮೇಲ್, ಎಂಪಿಎಸ್ ಮುಖ್ಯ ಗುರುಮಾತೆ ಆರ್.ಬಿ. ಆಲೂರ ಮತ್ತಿತರರು ಉಪಸ್ಥಿತರಿದ್ದರು.