ಚಿತ್ತಾಕುಲದಲ್ಲಿ ಪಂಜರಕ್ಕೆ ಬಿದ್ದ ಚಿರತೆ
ಕಾರವಾರ 05: ತಾಲೂಕಿನ ಚಿತ್ತಾಕುಲದ ಬಿಡ್ತುಲಭಾಗದಲ್ಲಿ ಕಳೆದ ಕೆಲ ದಿನಗಳಿಂದ ಕಾಣಿಸುತ್ತಿದ್ದ ಚಿರತೆ ಅರಣ್ಯ ಇಲಾಖೆ ಅಳವಡಿಸಿದ್ದ ಪಂಜರಕ್ಕೆ ಚಿರತೆ ಬಿದ್ದಿದೆ. ಬಿಡ್ತುಲಭಾಗದ ಜನವಸತಿ ಪಕ್ಕದ ಅರಣ್ಯ ಪ್ರದೇಶದಲ್ಲಿ ಚಿರತೆ ಓಡಾಟ ಕುರಿತು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಬಿಡ್ತುಲಭಾಗದಲ್ಲಿ ಪಂಜರ ಅಳವಡಿಸಿತ್ತು. ರವಿವಾರ ರಾತ್ರಿ ಪಂಜರಕ್ಕೆ ಚಿರತೆ ಬಿದ್ದಿದ್ದು, ಗ್ರಾಮಸ್ಥರ ಸಹಕಾರದೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸುರಕ್ಷಿತವಾಗಿ ಹಿಡಿದಿದ್ದಾರೆ. ಸೆರೆಯಾದ ಚಿರತೆಯನ್ನು ಅರಣ್ಯಕ್ಕೆ ಕೊಂಡೊಯ್ದು ಸುರಕ್ಷಿತವಾಗಿ ಬಿಡಲು ಅರಣ್ಯ ಇಲಾಖೆ ಸಿಬ್ಬಂದಿ ಕ್ರಮ ಕೈಗೊಂಡಿದೆ.