ಯರಗಟ್ಟಿ

ಬೃಹತ್ ಮಾನವ ಸರಪಳಿ ಕಾರ್ಯಕ್ರಮ

ಬೃಹತ್ ಮಾನವ ಸರಪಳಿ ಕಾರ್ಯಕ್ರಮ

ಯರಗಟ್ಟಿ 16: ಅಂತರಾಷ್ಟ್ರ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಸಂವಿಧಾನದ ಮಹತ್ವ ಹಾಗೂ ಅರಿವು ಮೂಡಿಸಲು ಸರ್ಕಾರವು ಆಯೋಜಿಸಿದ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಪಟ್ಟಣದ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಯಶಸ್ವಿಯಾಗಿ ನಡೆಯಿತು. ಚಿಕ್ಕೋಡಿ ಲೋಕಸಭಾ ಸಂಸದೆ ಪ್ರೀಯಾಂಕಾ ಜಾರಕಿಹೊಳಿ, ಶಾಸಕ ವಿಶ್ವಾಸ ವೈದ್ಯ, ಯರಗಟ್ಟಿ ತಹಶೀಲ್ದಾರ ಎಮ್‌. ಎನ್‌. ಮಠದ, ಸವದತ್ತಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗಣ್ಣವರ, ಬಿಇಓ ಮೋಹನ ದಂಡಿನ, ತಾ. ಪಂ. ಇಓ ಆನಂದ ಬಡಕುಂದ್ರಿ, ಪ. ಪಂ. ಮುಖ್ಯಾಧಿಕಾರಿ ಡಿ. ಎನ್‌. ತಹಶೀಲ್ದಾರ ಸೇರಿದಂತೆ ಇನ್ನುಳಿದವರ ಉಪಸ್ಥಿತಿಯಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿ ಶಪಥ ವಿಧಿ ನೆರವೇರಿಸುವ ಮೂಲಕ ಬೃಹತ್ ಮಾನವ ಸರಪಳಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. 

ಕಾರ್ಯಕ್ರಮ ಉದ್ಘಾಟಿಸಿದ ಮಾತನಾಡಿದ ಶಾಸಕ ವಿಶ್ವಾಸ ವೈದ್ಯ  ನಮ್ಮ ದೇಶದ ಪ್ರಜಾಪ್ರಭುತ್ವದ ಮೂಲಭೂತ ಹಕ್ಕು  ಮತ್ತು ಸಾರ್ವತ್ರಿಕ ಮೌಲ್ಯವಾಗಿದೆ. ಪ್ರಜಾಪ್ರಭುತ್ವ ರಕ್ಷಿಸುವುದು, ಅದರ ಮೌಲ್ಯಗಳನ್ನು ಉತ್ತೇಜಿಸಿವುದು ಹಾಗೂ ಪ್ರಜಾಪ್ರಭುತ್ವ ಅಲ್ಲದ ರಾಷ್ಟ್ರಗಳು ಪ್ರಜಾಪ್ರಭುತ್ವ  ವ್ಯವಸ್ಥೆ ಅಳವಡಿಸಿಕೊಳ್ಳಲು ಬೆಂಬಲಿಸುವದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಉದ್ದೇಶವಾಗಿದೆ ಎಂದು ಹೇಳಿದರು.ನಂತರ ಮಾತನಾಡಿದ ಸಂಸದೆ ಪ್ರೀಯಾಂಕಾ ಜಾರಕಿಹೊಳಿ  ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೀದರನಿಂದ ಚಾಮರಾಜನಗರದ ವರೆಗೆ ರಾಜ್ಯದ 31 ಜಿಲ್ಲೆಗಳನ್ನು ಒಳಗೊಂಡಿರುವ ಅತಿ ಉದ್ದದ ಮಾನವ ಸರಪಳಿಯನ್ನು ಜಿಲ್ಲೆ ರಾಮದುರ್ಗ ತಾಲೂಕಿನ ಸಾಲಹಳ್ಳಿಯಿಂದ ಕಿತ್ತೂರಿನ ತೇಗೂರ ಗ್ರಾಮದ ವರಗೆ ಅಂದಾಜು 145 ಕಿ.ಮಿ ಉದ್ಧದ ಮಾನವ ಸರಪಳಿಯನ್ನು ನಿರ್ಮಿಸಲಾಗಿತ್ತು.  

ಈ ಕಾರ್ಯಕ್ರಮದಲ್ಲಿ ಶಾಲಾ- ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಮಾನವ ಸರಪಳಿಯನ್ನು ನಿರ್ಮಿಸುವದರ ಮೂಲಕ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಮಹತ್ವ ಸಾರುವ ಸಂವಿಧಾನ ಪಿಠೀಕೆಯನ್ನು ಸಾಮೂಹಿಕವಾಗಿ ವಾಚಿಸುವ ಮೂಲಕ ನಮ್ಮ ಮುಂದಿನ ಯುವ ಪೀಳಿಗೆಗಳಿ ದಾರೀದೀಪ ಯಾಗಬೇಕು ಎಂದು ಹೇಳಿದರು.ಈ ವೇಳೆ ಡಿಎಸ್ಪಿ ಚಿದಂಬರ ವಿ. ಎಂ. ಸಿಪಿಐ ಆಯ್‌. ಎಂ. ಮಠಪತಿ, ಸವದತ್ತಿ ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚಣ್ಣವರ, ಎಪಿಎಂಸಿ ಅಧ್ಯಕ್ಷ ನೀಲಕಂಠ ಸಿದ್ದಬಸನವರ, ಅಬಕಾರಿ ಸಿಪಿಐ ಶ್ರೀಶೈಲ ಅಕ್ಕಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆರ್‌.ಆರ್‌. ಕುಲಕರ್ಣಿ, ಅರಣ್ಯ ಅಧಿಕಾರಿ ಸಂಜು ಸವಸುದ್ದಿ, ಆರ್‌.ಎಫ್‌.ಓ ನೇಹಾ ತೋರಗಲ್, ಪ. ಪಂ. ನಾಮನಿರ್ದೇಶಿತ ಸದಸ್ಯರಾದ ನಿಖಿಲ ಪಾಟೀಲ, ಹನುಮಂತ ಹಾರುಗೋಪ್ಪ, ಸಲಿಂಬೇಗ ಜಮಾದಾರ, ಶಿವಾನಂದ ಕರಿಗೋಣ್ಣವರ, ಶಾನೂರಬಿ ಡಿ.ಕೆ, ನೋಟರಿ ವಿ. ಜಿ. ಬಿರಾದಾರ ಪಾಟೀಲ, ವೈದ್ಯಾಧಿಕಾರಿ ಬಿ. ಎಸ್‌. ಬೆಳ್ಳೂರ, ಪಶುವೈದ್ಯಾಧಿಕಾರಿ ಎಂ. ವ್ಹಿ. ಪಾಟೀಲ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಇದ್ದರು. 


ಸುದ್ದಿ ಓದಿ