ಇಂದು ರೈತರ ಬೇಡಿಕೆ ಎಡೇರಿಕೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಲಕ್ಷ್ಮೇಶ್ವರ" 06: ಪಟ್ಟಣದಲ್ಲಿ ಶನಿವಾರ ರೈತರಿಗೆ ವಿವಿಧ ಬೇಡಿಕೆಗಳ ಎಡೇರಿಕೆಗಾಗಿ ಹಾಗೂ ಬರಗಾಲದ ಹಿನ್ನೆಲೆ ಬೆಳೆ ಪರಿಹಾರ ಬೆಳೆ ವಿಮೆ ಬಿಡುಗಡೆ, ಸಾಲಮನ್ನಾ ಮೇವು-ನೀರಿನ ವಿಳಂಬ, ಕೃಷಿ ಸಾಲದ ಹೊರೆ ಹಾಗೂ ಜಾನುವಾರುಗಳಿಗೆ ಮೇವು-ನೀರಿನ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಮಗ್ರ ರೈತ ಸಂಘಟನೆಗಳ ಒಕ್ಕೂಟದ ವತಿಯಿಂದ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ಅವಧಿಯಲ್ಲಿ ನೀಡಿದ ಮಾದರಿಯಲ್ಲಿಯೇ ಪ್ರಸಕ್ತ ಸಾಲಿನ ಬೆಳೆ ಪರಿಹಾರ ವಿತರಿಸಬೇಕು. 2025-26ನೇ ಸಾಲಿನ ಕೆಂಪು ಮೆಣಸಿನಕಾಯಿ ಬೆಳೆ ವಿಮೆ ಹಣವನ್ನು ತಕ್ಷಣ ಬಿಡುಗಡೆಗೊಳಿಸಬೇಕು. 2026-27ನೇ ಸಾಲಿನ ಮುಂಗಾರು ಬೆಳೆ ವಿಮೆ ಪಾವತಿಸಿದ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಒಕ್ಕೂಟ ಆಗ್ರಹಿಸಿದೆ.
ಬರದ ಹಿನ್ನೆಲೆಯಲ್ಲಿ ಬ್ಯಾಂಕುಗಳು ಬೆಳೆ ಸಾಲ ವಸೂಲಾತಿ ಸ್ಥಗಿತಗೊಳಿಸಬೇಕು. ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಜಾನುವಾರುಗಳಿಗೆ ಮೇವು ಖರೀದಿ ಪರಿಹಾರ, ಕುಡಿಯುವ ನೀರು ಹಾಗೂ ಗೋಶಾಲೆ ವ್ಯವಸ್ಥೆ ಕಲ್ಪಿಸಬೇಕು. ಹಿಂಗಾರು ಬಿತ್ತನೆಗೆ ನೆರವು ನೀಡಬೇಕು. ವಿದ್ಯುತ್ ಸಂಪರ್ಕ ಕಡಿತಗೊಂಡಿರುವ ರೈತರ ಪಂಪ್ಸೆಟ್ಗಳಿಗೆ ಮರುಸಂಪರ್ಕ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಗಳಾಗಿವೆ.
ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸಿಂಪ್ಲಿ ಕ್ರಾಸ್ ನಲ್ಲಿರುವ ಕ್ರಾಂತೀವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಮೆರವಣಿಗೆ ಆರಂಭವಾಗಿ ಬಜಾರ್ ಮಾರ್ಗವಾಗಿ ತಹಶೀಲ್ದಾರ್ ಕಚೇರಿಗೆ ತೆರಳಿರೈತರ ಬದುಕು ಮತ್ತು ಹಕ್ಕುಗಳ ರಕ್ಷಣೆಗಾಗಿ ಹೋರಾಟದ ನಡೆಯಲಿದ್ದು ಹೋರಾಟದಲ್ಲಿ ರೈತರು, ರೈತಪರ ಸಂಘಟನೆಗಳು ಮುಖಂಡರು ಹಲವಾರು ಗ್ರಾಮಗಳಿಂದ ರೈತ ಮುಖಂಡರು ಸಾರ್ವಜನಿಕರು ಪಾಲ್ಗೊಳ್ಳಲಿದ್ದಾರೆ ಎಂದು ಸಮಗ್ರ ರೈತ ಹೋರಾಟ ವೇದಿಕೆಯ ಮುಖಂಡರು ತಿಳಿಸಿದ್ದಾರೆ