ಧಾರವಾಡ - ಹುಬ್ಬಳ್ಳಿ

ನೇಪಾಳ ಪ್ರವಾಹ ಸಂತ್ರಸ್ತರಿಗೆ ಸಂತಾಪ ಸೂಚಿಸಿ ಒಂದು ನಿಮಿಷ ಮೌನಾಚರಣೆ

ನೇಪಾಳ ಪ್ರವಾಹ ಸಂತ್ರಸ್ತರಿಗೆ ಸಂತಾಪ ಸೂಚಿಸಿ ಒಂದು ನಿಮಿಷ ಮೌನಾಚರಣೆ

ಲೋಕದರ್ಶನ ವರದಿ 

ಧಾರವಾಡ 28: ಜೆಎಸ್‌ಎಸ್ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಮೃತ್ಯುಂಜಯ ನಗರದಲ್ಲಿ ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹದಿಂದಾಗಿ ಪ್ರಾಣ ಕಳೆದುಕೊಂಡವರಿಗೆ ಸಂತಾಪ ಸೂಚಿಸಲು ಹಾಗೂ ಪ್ರವಾಹದಿಂದ ತೊಂದರೆಗೊಳಗಾದ ನೇಪಾಳದ ಜನತೆಗೆ ಬೆಂಬಲ ವ್ಯಕ್ತಪಡಿಸಲು ಒಂದು ನಿಮಿಷ ಮೌನಾಚರಣೆ ನಡೆಸಲಾಯಿತು. ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಒಂದು ನಿಮಿಷ ಮೌನಾಚರಣೆ ಮೂಲಕ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅಗಲಿದ ಆತ್ಮಗಳಿಗೆ ಶಾಂತಿ ಸಿಗಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸಿದರು. ಪ್ರವಾಹದಿಂದ ಸಂತ್ರಸ್ತರಾದವರ ಸುರಕ್ಷತೆ ಹಾಗೂ ಶೀಘ್ರ ರಕ್ಷಣಾ ಕಾರ್ಯ ಯಶಸ್ವಿಯಾಗಲೆಂದು ಶಾಲಾ ಸಮುದಾಯವು ಪ್ರಾರ್ಥಿಸಿತು. ಈ ದುಃಖದ ಸಂದರ್ಭದಲ್ಲಿ ನೇಪಾಳದ ಜನತೆಯೊಂದಿಗೆ ಶಾಲೆಯು ತನ್ನ ಒಗ್ಗಟ್ಟನ್ನು ವ್ಯಕ್ತಪಡಿಸಿತು. 


ಸುದ್ದಿ ಓದಿ