ವ್ಯಕ್ತಿಯ ಮೌಲ್ಯ ಜಾತಿ-ಧರ್ಮದಿಂದಲ್ಲ, ಗುಣ-ನಡತೆಯಿಂದ ನಿರ್ಧಾರ: ಸ್ವಾಮಿ ನಿರ್ಭಯಾನಂದ
A person's worth is determined by character and conduct, not by caste or religion: Swami Nirbhayanan
ಲೋಕದರ್ಶನ ವರದಿ
ಗದಗ 05 : ವ್ಯಕ್ತಿಯ ಮೌಲ್ಯಮಾಪನವು ಆತ ಯಾವ ಜಾತಿ, ಧರ್ಮ ಅಥವಾ ಭಾಷೆಗೆ ಸೇರಿದವನು ಎಂಬುದರ ಆಧಾರದ ಮೇಲೆ ಅಲ್ಲ; ಆತನ ಗುಣ, ವ್ಯಕ್ತಿತ್ವ, ನಡತೆ ಹಾಗೂ ಸಮಾಜದ ಮೇಲಿನ ಬದ್ಧತೆಯ ಆಧಾರದ ಮೇಲೆ ನಿರ್ಧಾರವಾಗಬೇಕು ಎಂದು ವಿಜಯಪುರದ ಶ್ರೀರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ನಿರ್ಭಯಾನಂದ ಸರಸ್ವತಿ ಹೇಳಿದರು.
ನಗರದ ಡಾ. ರಾಜ್ಕುಮಾರ್ ರಸ್ತೆಯಲ್ಲಿರುವ ಪಾಂಚಜನ್ಯ ಸಭಾಂಗಣದಲ್ಲಿ ವಿವೇಕಮಂಟಪ ಆಯೋಜಿಸಿದ್ದ ‘ವಿವೇಕಮಂಟಪ ಉಪನ್ಯಾಸ ಮಾಲಿಕೆ’ಯಲ್ಲಿ ‘ಸ್ವಾಮಿ ವಿವೇಕಾನಂದರ ಲೀಲಾಮೃತ’ ವಿಷಯದ ಕುರಿತು ಅವರು ಉಪನ್ಯಾಸ ನೀಡಿದರು.
ಸಂಕುಚಿತ ಮನೋಭಾವದಿಂದ ಸಮಾಜದ ಅಭಿವೃದ್ಧಿ ಸಾಧ್ಯವಿಲ್ಲ. ಪ್ರತಿಯೊಬ್ಬ ನಾಗರಿಕನನ್ನೂ ಸಮಾನ ದೃಷ್ಟಿಯಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು. ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕತೆಯ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನಗಳು ರಾಷ್ಟ್ರದ ಏಕತೆಗೆ ಧಕ್ಕೆ ತರುತ್ತವೆ ಎಂದು ಅವರು ಹೇಳಿದರು.
ಪ್ರತಿಯೊಬ್ಬರಲ್ಲೂ ಸತ್ಯಶೋಧನೆಯ ಮನೋಭಾವ ಇರಬೇಕು. ಸನ್ಮಾರ್ಗ ಮತ್ತು ದುರ್ಮಾರ್ಗದ ಅರಿವಿನೊಂದಿಗೆ ತಮ್ಮ ಜೀವನವನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು. ತಪ್ಪು ದಾರಿಯಲ್ಲಿ ಸಾಗುತ್ತಿದ್ದೇವೆ ಎಂಬ ಅರಿವು ಮೂಡಿದರೆ ಅದನ್ನು ತಿದ್ದಿಕೊಳ್ಳುವ ಮನಸ್ಸು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ವಿವೇಕಮಂಟಪದ ಪ್ರಮುಖ ಪ್ರಭುದೇವ ಕಪ್ಪಗಲ್ಲು ಮಾತನಾಡಿ, ಕಳೆದ ಹಲವು ತಿಂಗಳುಗಳಿಂದ ಪ್ರತಿ ತಿಂಗಳ ಮೊದಲ ಭಾನುವಾರ ವಿವೇಕಾನಂದರ ಲೀಲಾಮೃತ ಕುರಿತು ಉಪನ್ಯಾಸ ಮಾಲಿಕೆ ನಡೆಯುತ್ತಿದೆ. ಅಮೆರಿಕ ಪ್ರವಾಸದ ನಂತರ ಜಿಲ್ಲೆಯ ವಿವಿಧ ಭಾಗಗಳಲ್ಲೂ ಈ ಉಪನ್ಯಾಸ ಸರಣಿಯನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಎಸ್‌ಆರ್‌ಎಂ ಶರಣಬಸವರಾಜ ಸಿದ್ಧರಾಂಪುರ ಭಕ್ತಿಗೀತೆಗಳನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಪಂಪಾಪತಪ್ಪ, ಕೆ. ರಾಜಶೇಖರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 