ಹಗರಿಬೊಮ್ಮನಹಳ್ಳಿ

ಕ್ರಮಿನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕ್ರಮಿನಾಶಕ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಹಗರಿಬೊಮ್ಮನಹಳ್ಳಿ 11: ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಯುವಕನೊಬ್ಬ ಸೆಲ್ಫಿ ವಿಡಿಯೋ ಚಿತ್ರೀಕರಿಸಿ ಕ್ರಿಮಿನಾಶಕ ಸೇವಿಸುವುದಾಗಿ ಮಾಡಿದ ವಿಡಿಯೋ ವಾಟ್ಸ್ಯಾಪ್‌ನಲ್ಲಿ ವೈರಲ್ ಅಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಮ್ಯಾಗಳಮನಿ ಪ್ರವೀಣ್ (30) ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದು, ಮೃತನ ಪತ್ನಿ ನೀಡಿದ ದೂರಿನ ಮೇರೆಗೆ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಪೋಲೀಸ್ ಠಾಣೆಯಲ್ಲಿ ನಾಲ್ವರ ಮೇಲೆ ಪ್ರಕರಣ ದಾಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ ಎಂದು ತಂಬ್ರಹಳ್ಳಿ ಠಾಣಾ ಪ್ರಭಾರಿ ಪಿಎಸೈ ಪಿ.ಸರಳ ಪತ್ರಿಕೆಗೆ ತಿಳಿಸಿದ್ದಾರೆ. 


ಸುದ್ದಿ ಓದಿ