ಜನಾರ್ದನ ರೆಡ್ಡಿ ಹತ್ಯೆಗೆ ಯೋಜಿತ ಷಡ್ಯಂತ್ರ
A planned conspiracy to kill Janardhana Reddy
ಬಳ್ಳಾರಿ: ನಗರದಲ್ಲಿ ಗುರುವಾರ (ಜ.1) ನಡೆದ ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ವಿಚಾರದ ಗಲಾಟೆ ತನಿಖೆಯನ್ನು ಹೈಕೋರ್ಟ್ ನಾಯಮೂರ್ತಿ ಇಲ್ಲವೇ ಸಿಬಿಐಗೆ ಒಪ್ಪಿಸುವಂತೆ ಮಾಜಿ ಸಚಿವ ಶ್ರೀರಾಮುಲು ಒತ್ತಾಯಿಸಿದ್ದಾರೆ. ಶುಕ್ರವಾರ (ಜ.02) ಜನಾರ್ದನ ರೆಡ್ಡಿ ಅವರೊಂದಿಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ಬಳ್ಳಾರಿ ಘಟನೆ ಪೂರ್ವ ನಿಯೋಜಿತ ಕುತಂತ್ರ. ಸಾಕಷ್ಟು ಮೊದಲೇ ಎಲ್ಲವನ್ನೂ ಪ್ಲಾನ್ ಮಾಡಿಕೊಂಡೇ ಗೊಂದಲ ಸೃಷ್ಟಿ ಮಾಡಿದ್ದಾರೆ. ಪೊಲೀಸರಿಂದ ಹಾರಿದ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತನ ಸಾವು ಸಂಭವಿಸಿಲ್ಲ. ಕಾಂಗ್ರೆಸ್ ನವರಿಂದಲೇ ಆತನ ಹತ್ಯೆಯಾಗಿದೆ. ಸಾವಿಗೆ ಶಾಸಕ ನಾರಾ ಭರತರೆಡ್ಡಿ ಕಡೆಯವರು ಹಾರಿಸಿದ ಗುಂಡು ಕಾರಣ. ಬಿಹಾರ, ಯುಪಿ ಕಡೆಯಿಂದ ಶಾಸಕ ಭರತ್ ರೆಡ್ಡಿ ತಂದಿರಿಸಿಕೊಂಡಿರುವ ಜನರಿರಿಂದಲೇ ಕೃತ್ಯ ನಡೆದಿದೆ. ಈ ಬಗ್ಗೆ ವಾಸ್ತವ ಹೊರತರಲು ನ್ಯಾಯಮೂರ್ತಿ ಇಲ್ಲವೇ ಸಿಬಿಐಗೆ ತನಿಖೆ ಒಪ್ಪಿಸಲಿ ಎಂದು ಆಗ್ರಹಿಸಿದರು.
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹತ್ಯೆಗೆ ಷಡ್ಯಂತ್ರ ಮಾಡಲಾಗಿದೆ. ಪೊಲೀಸ್ ಇಲಾಖೆ ಈ ಬಗ್ಗೆ ಸರಿಯಾದ ತನಿಖೆ ನಡೆಸಿದರೆ ಸತ್ಯಾಂಶ ಹೊರಬರಲಿದೆ. ದುರುದ್ದೇಶದಿಂದ ಮೊದಲೇ ಪ್ಲಾನ್ ಮಾಡಿಕೊಂಡೇ ರೆಡ್ಡಿ ಮನೆ ಮೇಲೆ ದಾಳಿಗೆ ಪ್ರಯತ್ನ ಮಾಡಿದ್ದಾರೆ ಎಂದು ಆರೋಪ ಮಾಡಿದರು.
ಖಾಸಗಿ ಗನ್ ಮ್ಯಾನ್ ನಿಂದಲೇ ಫೈರಿಂಗ್ ಆಗಿ ಸಾವು ಸಂಭವಿಸಿದೆ ಎಂದು ಎಸ್ಪಿ ಹೇಳಿದ್ದಾರೆ, ಇದು ಗಂಭೀರ ಪ್ರಕರಣ. ಜನಾರ್ದನ ರೆಡ್ಡಿಯಿಂದಲೇ ಕಾಂಗ್ರೆಸ್ ಕಾರ್ಯಕರ್ತನ ಸಾವು ಎಂಬ ಆರೋಪ ಸತ್ಯಕ್ಕೆ ದೂರವಾದದ್ದು ಎಂದರು.
ಘಟನೆ ಕುರಿತು ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ ಸೇರಿ ಎಲ್ಲಾ ಹಿರಿಯರ ಜತೆ ಮಾತನಾಡಿ ಮಾಹಿತಿ ನೀಡಲಾಗಿದೆ. ಇಂದು (ಜ.02) ಸಂಜೆ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಜನಾರ್ದನ ರೆಡ್ಡಿಯವರನ್ನು ಭೇಟಿ ಮಾಡಲಿದ್ದಾರೆ ಎಂದು ರಾಮುಲು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 