ಗದಗ

ಯುವಶಕ್ತಿಯಿಂದ ವಿಕಸಿತ ಭಾರತ ನಿರ್ಮಾಣಕ್ಕೆ ಸಂಕಲ್ಪಒಂದು ರಾಷ್ಟ್ರ, ಒಂದು ಚುನಾವಣೆ ದೇಶದ ಅಭಿವೃದ್ಧಿಗೆ ಪೂರಕ: ರವಿಕಾಂತ ಅಂಗಡಿ

ಯುವಶಕ್ತಿಯಿಂದ ವಿಕಸಿತ ಭಾರತ ನಿರ್ಮಾಣಕ್ಕೆ ಸಂಕಲ್ಪಒಂದು ರಾಷ್ಟ್ರ, ಒಂದು ಚುನಾವಣೆ ದೇಶದ ಅಭಿವೃದ್ಧಿಗೆ ಪೂರಕ: ರವಿಕಾಂತ ಅಂಗಡಿ
A pledge to build a developed India through youth power; 'One Nation, One Election' is conducive to

         ಗದಗ  07 :ಯುವಜನರಲ್ಲಿ ನಾಯಕತ್ವದ ಗುಣ, ಪ್ರಜಾಪ್ರಭುತ್ವದ ಮೌಲ್ಯಗಳು, ಸಂವಿಧಾನದ ಆಶಯಗಳು ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರದ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕೆ.ಎಲ್‌.ಇ. ಸಂಸ್ಥೆಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಹಾಗೂ ಮೈ ಭಾರತ ಕೇಂದ್ರ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ‘ವಿಕಸಿತ ಭಾರತ ಯುವ  2027' ಕಾರ್ಯಕ್ರಮವನ್ನು ನ.6ರಂದು ಮಹಾವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

         ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲರು ಹಾಗೂ ಉತ್ತರ ಕರ್ನಾಟಕ ಮಹಾಸಭಾದ ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಮಾತನಾಡಿ, ಯುವಜನರು ದೇಶದ ಭವಿಷ್ಯವನ್ನು ರೂಪಿಸುವ ಶಕ್ತಿಯಾಗಿದ್ದು, ನಾಯಕತ್ವ, ಶಿಸ್ತು, ಸಾಮಾಜಿಕ ಬದ್ಧತೆ ಹಾಗೂ ಸಂವಿಧಾನದ ಮೌಲ್ಯಗಳನ್ನು ವಿದ್ಯಾರ್ಥಿ ಜೀವನದಲ್ಲಿಯೇ ಬೆಳೆಸಿಕೊಳ್ಳಬೇಕು. ಜ್ಞಾನ, ಕೌಶಲ್ಯ ಮತ್ತು ಉತ್ತಮ ಚಿಂತನೆಗಳ ಮೂಲಕ ವಿಕಸಿತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

          ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮುನ್ನೆಲೆಗೆ ಬಂದಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಪರಿಕಲ್ಪನೆಯು ದೇಶದ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ಸುಧಾರಣೆಗೆ ಪೂರಕವಾಗಬಹುದು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವುದರಿಂದ ಚುನಾವಣಾ ವೆಚ್ಚ ಕಡಿಮೆ ಮಾಡುವುದರ ಜೊತೆಗೆ ಪದೇಪದೇ ಚುನಾವಣಾ ಕರ್ತವ್ಯಗಳಲ್ಲಿ ಸರ್ಕಾರಿ ಸಿಬ್ಬಂದಿ ನಿಯೋಜನೆಯಾಗುವುದನ್ನು ತಗ್ಗಿಸಬಹುದು.  


ಸುದ್ದಿ ಓದಿ