ಇಂಡಿ 07: ತಾಲ್ಲೂಕಿನ ಹೃದಯ ಭಾಗದಲ್ಲಿರುವ ಮಿನಿ ವಿಧಾನಸೌಧದ ಆಡಳಿತ ಸೌಧ ಸಭಾ ಭವನದಲ್ಲಿ ಮಾನ್ಯ ತಹಶೀಲ್ದಾರ ಗ್ರೇಡ್ -2 ಧನಪಾಲಶೇಟ್ಟಿ ದೇವೂರ ಇವರ ಅಧ್ಯಕ್ಷತೆಯಲ್ಲಿ ಶಿವಯೋಗಿ ಸಿದ್ದರಾಮ ಜಯಂತಿ , ಮಹಾಯೋಗಿ ವೇಮನ ಜಯಂತಿ ಮತ್ತು ಅಂಬಿಗರ ಚೌಡಯ್ಯ ಜಯಂತಿಗಳನ್ನು ಈ ಬಾರಿ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಇಂಡಿ ಜಿಲ್ಲಾ ಪಂಚಾಯತ್ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಸಣ್ಣ ನೀರಾವರಿ ಇಲಾಖೆ, ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ, ಆರೋಗ್ಯ ಇಲಾಖೆ, ಅರಣ್ಯ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.