ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಶೀಘ್ರ ಹೇಳಿಕೆ ನೀಡುವೆ: ಟ್ರಂಪ್
ವಾಷಿಂಗ್ಟನ್, ಮೇ 19, ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ) ಬಗ್ಗೆ ಯಾವುದೇ ಹೇಳಿಕೆ ನೀಡಲು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹಿಂದೇಟು ಹಾಕಿದ್ದು, ಆದರೆ ಶೀಘ್ರದಲ್ಲಿ ಈ ಸಂಸ್ಥೆಯ ವಿರುದ್ಧ ಹೇಳಿಕೆ ನೀಡುವುದಾಗಿ ತಿಳಿಸಿದ್ದಾರೆ. "ಇಂದು ನಾನು ಯಾವುದೇ ಹೇಳಿಕೆ ನೀಡಲಾರೆ. ಇನ್ನು ಕೆಲವೇ ದಿನಗಳಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡುವೆ. ಡಬ್ಲ್ಯುಎಚ್ಒ ಕಾರ್ಯಗಳಿಂದ ಬೇಸರವಾಗಿದೆ. ವಿಶ್ವ ವ್ಯಾಪಾರ ಸಂಘಟನೆಯ ಬಗ್ಗೆ ನನಗೆ ಸಂಪೂರ್ಣ ಸಂತೋಷವಿಲ್ಲ" ಎಂದು ಟ್ರಂಪ್ ತಿಳಿಸಿದ್ದಾರೆ. ಅಮೆರಿಕಯಿಂದ ಡಬ್ಲ್ಯುಎಚ್ಒಗೆ ನೀಡುವ 45 ಕೋಟಿ ಡಾಲರ್ ಹಣವನ್ನು ಕಡಿಗೊಳಿಸಲಾಗುವುದು. ಅಲ್ಲದೆ 4 ಕೋಟಿಯನ್ನು ಕಡಿತ ಗೊಳಿಸಲು ಶಿಫಾರಸು ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ. ಅಲ್ಲದೆ ಈ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಜಾಗತಿಕ ಸಾಂಕ್ರಾಮಿಕ ಕರೋನಾ ವೈರಸ್ (ಕೋವಿಡ್ -19) ಅನ್ನು ನಿಭಾಯಿಸುವಲ್ಲಿ ಡಬ್ಲ್ಯುಎಚ್‌ಒ ಪಾತ್ರವನ್ನು ಪರಿಶೀಲಿಸುವವರೆಗೆ, ಅದು ಅಮೆರಿಕದಿಂದ ಪಾವತಿಗಳನ್ನು ನಿಲ್ಲಿಸಿದೆ ಎಂಬುದು ಗಮನಾರ್ಹ.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 