ಸಂತ ಸೇವಾಲಾಲ್ ವಿಚಾರಧಾರೆಯನ್ನು ಯುವ ಪೀಳಿಗೆಯರು ಅಳವಡಿಸಿಕೊಳ್ಳಿ: ಉಪ ತಹಶೀಲ್ದಾರ್ ಮಲ್ಲಾಡದ.
ಅನ್ಯಾಯ-ಅಂಧ ವಿರುದ್ಧ ಹೋರಾಡಿ ಸಮಾನತೆ, ಶಿಕ್ಷಣ ಸಂದೇಶ ನೀಡಿದ ಸಂತ
ಬ್ಯಾಡಗಿ 17 : ತಾಲೂಕು ಆಡಳಿತ ವತಿಯಿಂದ ಭಾನುವಾರ ಸಂತ ಸೇವಾಲಾಲರ 287ನೇ ಜಯಂತಿಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಏರಿ್ಡಸಿದ್ದ ಕಾರ್ಯಕ್ರಮದಲ್ಲಿ ಉಪ ತಹಶೀಲ್ದಾರ್ ಎಸ್‌ಎಸ್ ಮಲ್ಲಾಡದ ಅವರು ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪಗೌರವ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿದರು.
ಬಳಿಕ ಮಾತನಾಡಿ, ಸಂತ ಸೇವಾಲಾಲ್ ಮಹಾರಾಜರ ವಿಚಾರಧಾರೆಗಳು ಯುವ ಪೀಳಿಗೆಗೆ ದಿಕ್ಕು ತೋರಿಸುವ ದೀಪವಾಗಿದೆ. ಅನ್ಯಾಯ-ಅಂಧ ಶ್ರದ್ಧೆಗಳ ವಿರುದ್ಧ ಹೋರಾಡಿ ಸಮಾನತೆ, ಶಿಕ್ಷಣ ಹಾಗೂ ಆತ್ಮಗೌರವದ ಸಂದೇಶ ನೀಡಿದ ಸಂತ ಸೇವಾಲಾಲ್ ಮಹಾರಾಜರ ಆದರ್ಶಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ ಎಂದರು.ಸಮಾಜದ ಮುಖಂಡ ನ್ಯಾಯವಾದಿ ಎಚ್‌ಆರ್ ಲಮಾಣಿ ಮಾತನಾಡಿ ಸಂತ ಸೇವಾಲಾಲ್ ಮಹಾರಾಜರು ಮಹಾನ್ ಪವಾಡ ಪುರುಷರಾಗಿದ್ದರು. ಅವರು ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರು. ಮೂಢನಂಬಿಕೆ, ಕೆಟ್ಟ ಆಚರಣೆಗಳ ವಿರುದ್ಧ ಧ್ವನಿ ಎತ್ತಿದರು ಮತ್ತು ಜನರಿಗೆ ತಿಳಿವಳಿಕೆ ಮೂಡಿಸಿದರು. ಸಮಾಜದ ಐಕ್ಯತೆ ಮತ್ತು ಸಹಬಾಳ್ವೆಗೆ ಪ್ರೇರೇಪಿಸಿದರು. ಬ್ರಿಟಿಷರು ತೆರಿಗೆ ಹೆಚ್ಚಳ ಮಾಡಿದಾಗ ವೀರ ಸೇನಾನಿಯಾಗಿ ಹೋರಾಡಿದರು. ಯಾವುದೇ ಮಹಾನ್ ಪುರುಷರು ಒಂದೇ ಜಾತಿಗೆ ಸೀಮಿತವಿಲ್ಲ. ಅವರು ಮಾನವ ಕುಲಕ್ಕೆ ಸುಧಾರಣೆಗೆ ಪ್ರಯತ್ನಿಸಿದವರು ನಮ್ಮ ಸಮಾಜದ ಯುವ ಪೀಳಿಗೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಮುಂದೆ ಬರಬೇಕು ಎಂದು ತಿಳಿಸಿದರು.
ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಸಮಾಜದವರಾದ ಅರ್ಜುನಪ್ಪ ಲಮಾಣಿ, ಎಂ ಎಂ ಕಬ್ಬೂರ್, ಲಕ್ಷ್ಮಣ್ ಚತ್ರದ, ಸಿರಸಪ್ಪ ಲಮಾಣಿ, ರಾಮಪ್ಪ ಲಮಾಣಿ ,ಸೋಮಪ್ಪ ಲಮಾಣಿ, ಮಂಜಪ್ಪ ಲಮಾಣಿ, ಕೃಷ್ಣಪ್ಪ ಲಮಾಣಿ, ಪುಟ್ಟಪ್ಪ ಲಮಾಣಿ, ಫಕೀರ್ಪ ಲಮಾಣಿ, ರಾಜು ನಾಯಕ್. ತಿರಕಪ್ಪ ನಾಯಕ್ ಹಾಗೂ ಸಮಾಜದ ಅನೇಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.