ಇನ್ನು ಹತ್ತು ವರ್ಷಗಳಲ್ಲಿ ಕರ್ನಾಟಕದಲ್ಲಿ ಮಹತ್ವದ ಸೇವಾ ಪರ್ವ: ಸದ್ಗುರು ಶ್ರೀ ಮಧುಸೂದನ ಸಾಯಿ

ಇನ್ನು ಹತ್ತು ವರ್ಷಗಳಲ್ಲಿ ಕರ್ನಾಟಕದಲ್ಲಿ ಮಹತ್ವದ ಸೇವಾ ಪರ್ವ: ಸದ್ಗುರು ಶ್ರೀ ಮಧುಸೂದನ ಸಾಯಿ A significant era of service in Karnataka over the next ten years: Sadguru Sri Madhusudan Sai


ಗದಗ 22 : ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಉಚಿತ ಆಸ್ಪತ್ರೆ ನಿರ್ಮಾಣದ ಯೋಜನೆ ಜಾರಿಗೊಳಿಸಲು ಇನ್ನೂ ಮೂರ್ನಾಲ್ಕು ವರ್ಷಗಳ ಕಾಲಾವಕಾಶ ಬೇಕಾಗಬಹುದು. ಹತ್ತು ವರ್ಷ ಸಮಯ ಕೊಡಿ. ಕರ್ನಾಟವನ್ನು ಬದಲಿಸುತ್ತೇನೆ ಎಂದು "ಒನ್ ವಲ್ಡ್‌ ಒನ್ ಫ್ಯಾಮಿಲಿ ಮಿಷನ್" ಸಂಸ್ಥಾಪಕರಾದ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ನಗರದಲ್ಲಿ ಶುಕ್ರವಾರ (ಆ 21) ನಡೆದ "ದಿವ್ಯ ಸಂಜೆ" ಸಂವಾದ ಕಾರ್ಯಕ್ರಮದಲ್ಲಿ ಖ್ಯಾತ ಗಾಯಕಿ ವಿದುಷಿ ಸಂಗೀತಾ ಕಟ್ಟಿ ಕೇಳಿದ ಪ್ರಶ್ನೆಗಳಿಗೆ ಸದ್ಗುರು ಉತ್ತರಿಸಿದರು.

ಆಸ್ಪತ್ರೆ ನಿರ್ವಹಣೆಗೆ ಅಗತ್ಯವಿರುವ ವೈದ್ಯರು, ನರ್ಸ್ಗಳು ಹಾಗೂ ಪ್ಯಾರಾಮೆಡಿಕಲ್ ಸಿಬ್ಬಂದಿ ಲಭ್ಯವಾದ ಬಳಿಕ ಯೋಜನೆಯನ್ನು ಹಂತಹಂತವಾಗಿ ಜಾರಿಗೊಳಿಸಲಾಗುವುದು. ಮೊದಲ ಹಂತದಲ್ಲಿ ವೆಲ್ನೆಸ್ ಕೇಂದ್ರಗಳನ್ನು ಆರಂಭಿಸಿ, ಬಳಿಕ 50 ಹಾಸಿಗೆಗಳ ಆಸ್ಪತ್ರೆ ಸ್ಥಾಪಿಸಲಾಗುವುದು. ನಮ್ಮ ವಿದ್ಯಾರ್ಥಿಗಳೇ ವೈದ್ಯಕೀಯ ಸಿಬ್ಬಂದಿಯಾಗಿ ಸೇವೆಗೆ ಬಂದ ಬಳಿಕ ದೊಡ್ಡ ಆಸ್ಪತ್ರೆ ನಿರ್ಮಾಣದ ಯೋಜನೆಗೆ ವೇಗ ನೀಡಲಾಗುವುದು. ಪ್ರತಿ ತಾಲೂಕಿನಲ್ಲೂ ಇಂತಹ ಕೇಂದ್ರಗಳನ್ನು ನಿರ್ಮಿಸುವ ಆಶಯವಿದೆ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಅಭಿಪ್ರಾಯಪಟ್ಟರು.