ಚಿಕ್ಕೋಡಿ

ಸಹಕಾರ ಮಹಾಮಂಡಳದ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ

ಸಹಕಾರ ಮಹಾಮಂಡಳದ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ

ನೂತನ ಸಹಕಾರ ಮಹಾಮಂಡಳದ ರಾಜ್ಯ ಉಪಾಧ್ಯಕ್ಷ ಜಗದೀಶ ಕವಟಗಿಮಠ ಭರವಸೆ  

ಚಿಕ್ಕೋಡಿ 12: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದಲ್ಲಿ ಬೆಳಗಾವಿ ವಿಭಾಗಕ್ಕೆ ಪ್ರಥಮ ಬಾರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ಸಿಕ್ಕಿದೆ. ಇಡೀ ರಾಜ್ಯದಲ್ಲಿ ಸಹಕಾರ ಮಹಾಮಂಡಳದ ಬೆಳವಣಿಗೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ನೂತನ ಸಹಕಾರ ಮಹಾಮಂಡಳದ ರಾಜ್ಯ ಉಪಾಧ್ಯಕ್ಷ ಜಗದೀಶ ಕವಟಗಿಮಠ ಹೇಳಿದರು.

ಸೋಮವಾರ ಚಿಕ್ಕೋಡಿ ನಗರದ ಸಿಎಲ್‍ಇ ಸಂಸ್ಥೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,  35 ವರ್ಷದ ಇತಿಹಾಸದಲ್ಲಿ ಪ್ರಥಮ ಬಾರಿಗೆ ಬೆಳಗಾವಿ ವಿಭಾಗಕ್ಕೆ ಸಹಕಾರ ಮಹಾಮಂಡಳದ ಸ್ಥಾನ ಸಿಗಲು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವರಾದ ಶಶಿಕಲಾ ಜೊಲ್ಲೆ, ಉಮೇಶ ಕತ್ತಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ದುರೀಣ ಡಾ, ಪ್ರಭಾಕರ ಕೋರೆ, ಮಾಜಿ ಸಂಸದ ರಮೇಶ ಕತ್ತಿ ಹಾಗೂ ಜಾರಕಿಹೊಳಿ ಸಹೋಧರರ ವಿಶೇಷ ಪ್ರಯತ್ನದಿಂದ ಸ್ಥಾನ ಸಿಕ್ಕಿರುವುದು ಸಂತಸ ತಂದಿದೆ. ಉಪಾಧ್ಯಕ್ಷರಾಗಲು ಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ವಿಶೇಷ ಪ್ರಯತ್ನ ಮಾಡಿದ್ದಾರೆ ಎಂದರು.

ಸಹಕಾರ ಸಂಸ್ಥೆಯ ಮಾತೃಸಂಸ್ಥೆಯಾದ ಸಹಕಾರ ಮಹಾಮಂಡಳದ ಪ್ರಾಂತೀಯ ಕಚೇರಿಯ ಬೆಳಗಾವಿಯಲ್ಲಿ ಆರಂಭ ಮಾಡಲಾಗುತ್ತದೆ. ಶೀಘ್ರವಾಗಿ ಕಚೇರಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಲಿದೆ. ಅದರಂತೆ ಸಹಕಾರ ಮಹಾಮಂಡಳದ ಬೆಳವಣಿಗೆಗೆ ಹೆಚ್ಚಿನ ಆಸಕ್ತಿ ವಹಿಸಲಾಗುತ್ತದೆ ಎಂದರು.ನಗರದ ಜನರು ಲಸಿಕೆ ಹಾಕಿಸಿಕೊಳ್ಳಿ: ಚಿಕ್ಕೋಡಿ ನಗರದ ಎಲ್ಲ ವಾರ್ಡಗಳಲ್ಲಿ ಕೋವಿಡ್ ಲಸಿಕೆ ನೀಡುವ ಅಭಿಯಾನ ಆರಂಭವಿದೆ. ಲಸಿಕೆ ಹಾಕಿಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಇದರಿಂದ ಕೊರೊನಾ ದೂರಾಗಲಿದೆ ಎಂದ ಅವರು, ಇದ್ತೀಚೆಗೆ ನನಗೂ ಕೊರೊನಾ ಪೊಸಿಟಿವ ಬಂದಿತ್ತು. 14 ದಿನಗಳ ಕಾಲ ಕ್ವಾರಂಟೈನ್ ಆಗಿ ನೆಗಟಿವ ವರದಿ ಬಂದ ಮೇಲೆ ಸಾರ್ವಜನಿಕವಾಗಿ ಹೊರಬರಲಾಗಿದೆ. ಆದರೂ ಸಾರ್ವಜನಿಕರು ಖುದ್ದಾಗಿ ಭೇಟಿ ನೀಡದೇ ದೂರವಾಣಿ ಮೂಲಕ ಶುಭಾಶಯ ತಿಳಿಸಬೇಕು ಎಂದು ಮನವಿ ಮಾಡಿದರು.ಪುರಸಭೆ ಅಧ್ಯಕ್ಷ ಪ್ರವೀಣ ಕಾಂಬಳೆ, ಅಕ್ರಮ ಅರ್ಕಾಟೆ ಮುಂತಾದವರು ಇದ್ದರು.

ಸುದ್ದಿ ಓದಿ