ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ
ಕಾಗವಾಡ 12: ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಾಗವಾಡ ಪಟ್ಟಣದಲ್ಲಿ ಚಿಕ್ಕೋಡಿ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆಯವರು ಜನಸಂಪರ್ಕ ಸಭೆ (ಜನತಾ ದರ್ಶನ) ನಡೆಸಿ, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಅವರ ಮನವಿಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದರು.
ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಗುರಿಯಾಗಿದ್ದು, ಅಭಿವೃದ್ಧಿಯತ್ತ ಹೆಜ್ಜೆಯನ್ನುಡುತ್ತಿದ್ದೇವೆ. ಇದರೊಂದಿಗೆ ಜನರ ಸಂಕಷ್ಟಗಳಿಗೆ ಸ್ಪಂದಿಸುವುದು ನನ್ನ ಜವಾಬ್ದಾರಿ. ಈ ನಿಟ್ಟಿನಲ್ಲಿ ಇಂದಿನ ಸಭೆಯಲ್ಲಿ ಜನರ ಸಮಸ್ಯೆಗಳನ್ನು ಮನಗಂಡಿದ್ದೇನೆ. ಹಂತವಾಗಿ ನನ್ನ ಪ್ರಜಾಬಾಂಧವರ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಹೇಳಿದರು.ತಹಶೀಲ್ದಾರ ರಾಜೇಶ ಬುರ್ಲಿ, ಸಿಡಿಪಿಓ ಸಂಜೀವಕುಮಾರ ಸದಲಗೆ, ಕ್ಷೇತ್ರ ಶಿಕ್ಷಣಧಿಕಾರಿ ಆರ್. ಆರ್. ಮಂಜೆ, ಮಂಡಲ ಅಧ್ಯಕ್ಷ ತಮ್ಮಣ್ಣ ಪಾರಶೆಟ್ಟಿ, ಚಿಕ್ಕೋಡಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದೀಪಕ ಪಾಟೀಲ, ಬಿಜೆಪಿ ಮುಖಂಡರಾದ ಸ್ವಪ್ನಿಲ್ ಪಾಟೀಲ, ಸೌರಭ ಪಾಟೀಲ, ಅಧಿಕಾರಿಗಳು ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು