ಕೃಷಿ ಇಲಾಖೆಯ ಸಹಾಯಧನ ಪಡೆಯಲು ಮಣ್ಣು ಪರೀಕ್ಷೆ ವರದಿ ಕಡ್ಡಾಯ
A soil test report is mandatory to avail of the Agriculture Department's subsidy
ಲೋಕದರ್ಶನ ವರದಿ
ಗದಗ ಸೆ.17: ಕೃಷಿ ಯಾಂತ್ರೀಕರಣ, ಸೂಕ್ಷ್ಮ ನೀರಾವರಿ ಸೇರಿದಂತೆ ಕೃಷಿ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ರೈತರು ತಮ್ಮ ಜಮೀನಿನ ಮಣ್ಣು ಪರೀಕ್ಷೆ ಮಾಡಿಸಿ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಶ್ರೀಮತಿ ಚೇತನಾ ಪಾಟೀಲ ತಿಳಿಸಿದ್ದಾರೆ.
ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ದೊರೆಯುವ ಸೌಲಭ್ಯಗಳನ್ನು ಪಡೆಯಲು ಪ್ರಸಕ್ತ ವರ್ಷದಿಂದಲೇ ಮಣ್ಣು ಪರೀಕ್ಷೆಯ ವರದಿಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ. ಭೂಮಿಯ ಫಲವತ್ತತೆ ಹೆಚ್ಚಿಸುವುದು ಹಾಗೂ ವೈಜ್ಞಾನಿಕ ಕೃಷಿಗೆ ಉತ್ತೇಜನ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ.
ಕೃಷಿ ಯಾಂತ್ರೀಕರಣ, ಸೂಕ್ಷ್ಮ ನೀರಾವರಿ ಘಟಕಗಳು ಹಾಗೂ ಕೃಷಿ ಇಲಾಖೆಯ ಇತರೆ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ರೈತರು ತಮ್ಮ ಜಮೀನಿನ ಮಣ್ಣು ಪರೀಕ್ಷೆ ವರದಿಯನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 