ಬಳ್ಳಾರಿ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯವ್ಯಾಪ್ತಿ ಪ್ರತಿಭಟನೆ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರಾಜ್ಯವ್ಯಾಪ್ತಿ ಪ್ರತಿಭಟನೆ

ಬಳ್ಳಾರಿ 02: ಎರಡನೇ ಕೋವಿಡ್ ಅಲೆಗೆ ಸಿಲುಕಿ ನಿರುದ್ಯೋಗಿಗಳಾಗಿರುವ ರಾಜ್ಯದ ನೋಂದಾಯಿತ/ವಲಸೆ ಕಾರ್ಮಿಕರ, ಕಟ್ಟಡ ಕಾರ್ಮಿಕ ಕುಟುಂಬಗಳಿಗೆ ಮೂರು ತಿಂಗಳಿಗೆ ಮಾಸಿಕ 10 ಸಾವಿರ ಸಹಾಯಧನ ನೀಡಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ನಿರ್ಮಾಣ ವಲಯದ ಕಾರ್ಮಿಕರು ಅನೇಕ ಹೋರಾಟ ನಡೆಸಿದ್ದರೂ ಸರ್ಕಾರ ಕೇವಲ ರೂ. 3000 ಪರಿಹಾರ ಘೋಷಿಸಿದೆ. ಇದು ರಾಜ್ಯದ ಲಕ್ಷಾಂತರ ನಿರ್ಮಾಣ ವಲಯದ ಕಾರ್ಮಿಕರನ್ನು ಅಸಮಾಧಾನ ಗೊಳಿಸಿದೆ ಎಂಬುದನ್ನು ತಮ್ಮ ಗಮನಕ್ಕೆ ತರಬಯಸುತ್ತಿದ್ದೇವೆ. ಈ ತೀರ್ಮಾನವನ್ನು ತಾವು ಕೂಡಲೇ ಮಾರಿ​‍್ಡಸಿ ಕೂಡಲೇ ನೋಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮೂರು ತಿಂಗಳಿಗೆ ಮಾಸಿಕ 10 ಸಾವಿರ ಪರಿಹಾರ ನೀಡಬೇಕೆಂದು ಕೇಂದ್ರ ಕಾರ್ಮಿಕ ಸಂಘಟನೆ ಂಋಖಿಗಅ ಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಕಟ್ಟಡ ಕಾರ್ಮಿಕ ಸಂಘದ ಉಪಾಧಕ್ಷರಾದ ಎ.ದೇವದಾಸ್ ಅವರು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ದಿ. 02ರಂದು ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಮೂಲಕ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್‌ರವರಿಗೆ  ಮನವಿ ಪತ್ರ ಸಲ್ಲಿಸಲಾಯಿತು. 

ಮುಂದುವರಿದು ಕಟ್ಟಡ ಕಾರ್ಮಿಕರಿಗೆ 3000 ರೂಪಾಯಿಗಳ ಪರಿಹಾರ ನೀಡಲು ಮಂಡಲಿ ಆದೇಶ ಹೊರಡಿಸಿ ಒಂದು ತಿಂಗಳು ಕಳೆದರೂ ಸಹ ಬಹುತೇಕ ಕಟ್ಟಡ ಕಾರ್ಮಿಕರ ಖಾತೆಗೆ ಇದುವರೆಗೂ ಪರಿಹಾರದ ಹಣ ಸೇರಿಲ್ಲ, ಆದ್ದರಿಂದ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರ ಖಾತೆಗೆ ಪರಿಹಾರ ನಿಧಿ ಕೂಡಲೆ ತಲುಪಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ತಮ್ಮಲ್ಲಿ ಕೋರುತ್ತೇವೆ. 

ಸಾಂಕ್ರಾಮಿಕ ರೋಗ ಮತ್ತು ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ನಿಂದಾಗಿ ಕಳೆದ 3 ತಿಂಗಳಿಗೂ ಹೆಚ್ಚಿನ ದಿನಗಳಿಂದ ಕಟ್ಟಡ ಕಾರ್ಮಿಕರು ಕೆಲಸವಿಲ್ಲದ ಕಾರಣ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ನೆರವಾಗುವ ಸಲುವಾಗಿ ವಿವಿಧ ಪರಿಹಾರಕ್ಕಾಗಿ ಕ್ಲೇಮ್ ಸಲ್ಲಿಸಿರುವ ಎಲ್ಲಾ ಅರ್ಜಿಯನ್ನು ವಿಲಾವಾರು ಮಾಡಿ ಕೂಡಲೆ ಮೊತ ್ತವನ್ನು ಅವರ ಖಾತೆಗೆ ಜಮಾ ಮಾಡಬೇಕೆಂದು ಆಗ್ರಹಿಸಿದರು. 

ಪತ್ರಿಕಾ ವರದಿಗಳ ಪ್ರಕಾರ ವಾಸ್ತವದ ಮಾರುಕಟೆ ್ಟ ಬೆಲೆಗೂ ಮಂಡಳಿ ಖರೀದಿ ಮಾಡಿರುವ ಆಹಾರ ಪದಾರ್ಥಗಳ ಕಿಟ್ ಬೆಲೆಗೂ ವ್ಯತ್ಯಾಸ ಕಂಡು ಬರುತ್ತದೆ. ಆದ್ದರಿಂದ ಆಹಾರ ಪದಾರ್ಥಗಳ ಖರೀದಿಯ ಟೆಂಡರ್ ಪ್ರಕ್ರಿಯೆ ಸರಿಯಾಗಿ ನಡೆದಿರುವ ಬಗ್ಗೆ ಕೂಡಲೆ ಸೂಕ್ತ ಮಟ್ಟದಲ್ಲಿ ತನಿಖೆ ನಡೆಸಿ, ತನಿಖೆ ಮುಗಿಯುವವರೆಗೂ ಟೆಂಡರ್ ಪಡೆದಿರುವ ಕಂಪನಿಗಳಿಗೆ ಪಾವತಿಸಬೇಕಾದ ಮೊತ್ತವನ್ನು ನೀಡದಿರಿ, ತನಿಖೆಯಲ್ಲಿ ತಪ್ಪು ಕಂಡು ಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. 


ಸುದ್ದಿ ಓದಿ