ಜಮಖಂಡಿ

ಶಾಲೆಯಲ್ಲಿ ಪರೀಕ್ಷೆ ಬರೆಯುವ ಸಮಯದಲ್ಲಿ ವಿದ್ಯಾರ್ಥಿಗೆ ಹೃದಯಾಘಾತ

ಶಾಲೆಯಲ್ಲಿ ಪರೀಕ್ಷೆ ಬರೆಯುವ ಸಮಯದಲ್ಲಿ ವಿದ್ಯಾರ್ಥಿಗೆ ಹೃದಯಾಘಾತ

ಲೋಕದರ್ಶನ ವರದಿ

ಜಮಖಂಡಿ  29: ಜಮಖಂಡಿ ತಾಲ್ಲೂಕಿನ ಹುಲ್ಯಾಳ ಗ್ರಾಮದ ಹೈಸ್ಕೂಲ್ನಲ್ಲಿ ಪರೀಕ್ಷೆ ಬರೆಯುವ ಸಮಯದಲ್ಲಿ ವಿದ್ಯಾರ್ಥಿಯೊಬ್ಬನಿಗೆ ಹೃದಯಾಘಾತ ಸಂಭವಿಸಿದ ಘಟನೆ ನಡೆದಿದೆ. ತಾಲ್ಲೂಕಿನ ಇನಾಂ ಹಂಚಿನಾಳ ಪುನರ್ವಸತಿ ಕೇಂದ್ರ ನಿವಾಸಿಯಾದ ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರ (15) ವರ್ಷದ ವಿದ್ಯಾರ್ಥಿಯು ಹುಲ್ಯಾಳ ಗ್ರಾಮದ ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ 9ನೇಯ ತರಗತಿಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿದ್ದ ವಿದ್ಯಾರ್ಥಿ ಎನ್ನಲಾಗಿದೆ.

   ಶ್ರೀ ಗುರು ಶಂಭುಲಿಂಗೇಶ್ವರ ಮಾಧ್ಯಮಿಕ ಶಾಲೆಯಲ್ಲಿ ಅರ್ಧ ವಾರ್ಷಿಕ ಪರೀಕ್ಷೆಯನ್ನು ಬರೆಯುವ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು. ಅಲ್ಲಿರುವ ಶಿಕ್ಷಕರು ವಿದ್ಯಾಥರ್ಿ ಪಾಲಕರಿಗೆ ಮಾಹಿತಿ ನೀಡಿದರು ಎಂದು ತಿಳಿದು ಬಂದಿದೆ. ವಿದ್ಯಾರ್ಥಿ ರಾಹುಲ್ ವಿಠ್ಠಲ ಕೋಲಕಾರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಮಖಂಡಿ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ ಘಟನೆ ಸಂಬಂಧಿಸಿದೆ. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ರಾಹುಲ್ ಸಾವಿನ ಸುದ್ದಿ ತಿಳಿದು ಕಂಬನಿ ಮಿಡಿದಿದ್ದಾರೆ. ಮನೆಯ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟುವಂತೆ ಇತ್ತು 

ಸುದ್ದಿ ಓದಿ