ರಾಣೆಬೆನ್ನೂರ

ಜೀವನದಲ್ಲಿ ಜಿಗುಪ್ಸೆ ವಿದ್ಯಾರ್ಥಿನಿ ಆತ್ಮಹತ್ಯೆ

ಜೀವನದಲ್ಲಿ ಜಿಗುಪ್ಸೆ ವಿದ್ಯಾರ್ಥಿನಿ ಆತ್ಮಹತ್ಯೆ

ರಾಣೆಬೆನ್ನೂರ: ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ವಿದ್ಯಾರ್ಥಿನಿಯೋರ್ವಳು ಊಟದ ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ರವಿವಾರದಂದು ನಡೆದಿದೆ. ಮೃತಳನ್ನು ಹೂವಿನಹಡಗಲಿ ತಾಲೂಕು ಮೈಲಾರದ ಪವಿತ್ರ ತಂಬೂರಿ (21) ಎಂದು ಗುರುತಿಸಲಾಗಿದೆ. ಸ್ಥಳೀಯ ರಾಜರಾಜೇಶ್ವರಿ ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿ ಅಭ್ಯಾಸ ಮಾಡುತ್ತಿದ್ದಳು. ಕಳೆದ ಮೂರು ದಿನಗಳ ಹಿಂದೆಯೇ ಕೊಠಡಿಯೊಳಗೆ ಲಾಕ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಠಡಿಯ ಸ್ವಚ್ಛತೆಗೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ . ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದ.

ಸುದ್ದಿ ಓದಿ