ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆಗೆ ಶರಣು
ರಾಣೆಬೆನ್ನೂರ3:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರನೋರ್ವನು ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಸಂಭವಿಸಿದೆ. ನಗರ ಹೊರ ಹೊಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಡಿಪೋದಲ್ಲಿ ಈ ಘಟನೆ ನಡೆದಿದೆ. ಸಾವಿಗೆ ಶರಣಾದವನನ್ನು ಮಲ್ಲನಗೌಡ ಬಡಗೇರ (48) ಎಂದು ಗುರುತಿಸಲಾಗಿದೆ ಸಾರಿಗೆ ನೌಕರ. ಆತ್ಮಹತ್ಯೆಗೆ ನಿಖರವಾದ ಕಾರಣ ಏನು ಎನ್ನುವುದನ್ನು ತಿಳಿದುಬಂದಿಲ್ಲ. ಈ ಕುರಿತು ಹಲಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ