ಮತದಾರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ
ಲೋಕದರ್ಶನ ವರದಿ
ಮುಂಡರಗಿ 10: ಪ್ರತಿಯೊಬ್ಬ ಅರ್ಹ ಮತದಾರರು ಓಟರ್ ಹೆಲ್ಫ್ಲೈನ್ ಆಪ್ ಮೂಲಕ ತಮ್ಮ ಮತದಾರರ ಗುರುತಿನ ಚೀಟಿಗೆೆ ಆಧಾರ್ ನಂಬರ್ ಲಿಂಕ್ ಮಾಡಿಕೊಳ್ಳಬೇಕು. ಹೀಗಾಗಿ ವಿದ್ಯಾರ್ಥಿಗಳು ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ತಹಶೀಲ್ದಾರ್ ಆಶಪ್ಪ ಪೂಜಾರಿ ತಿಳಿಸಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ತಾಲ್ಲೂಕು ಆಡಳಿತವು ಪಟ್ಟಣದ ಕಾಲೇಜು ವಿದ್ಯಾರ್ಥಿಗಳಿಗಾಗಿ ಬುಧವಾರ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರದ ಅಮೃತ ಮಹೋತ್ಸವ ಆಚರಣೆಗೆ ಭರದ ಸಿದ್ಧತೆ ಮಾಡಿಕೊಳ್ಳುತ್ತಲಿದೆ. ಪ್ರತಿಯೊಬ್ಬ ಪ್ರಜೆಯು ತನ್ನ ಮನೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿಕೊಂಡರು.
ಮಾಧಕ ವಸ್ತು ಸೇವನೆ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಕಾಲೇಜು ವಿದ್ಯಾರ್ಥಿಗಳು ತಮ್ಮ ಗ್ರಾಮಗಳಲ್ಲಿ ದುಶ್ಚಟಗಳ ಕುರಿತಂತೆ ಜನ ಜಾಗೃತಿ ಮೂಡಿಸಬೇಕು. ತಮ್ಮ ತಮ್ಮ ಗ್ರಾಮಗಳನ್ನು ದುಶ್ಚಟಮುಕ್ತ ಗ್ರಾಮವನ್ನಾಗಿ ಪರಿವರ್ತಿಸಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ಡಾ.ಡಿ.ಸಿ.ಮಠದ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಸಚ್ಚಿನ್, ಎನ್.ಸಿ.ಸಿ. ಕಾರ್ಯಕ್ರಮಧಿಕಾರಿ ಕುಮಾರ ಕಲ್ಮಠ, ಡಾ.ಜೆ.ಕುಮಾರ, ಮನೋಜ ಕೋರೆ್ಡ, ಗುರುರಾಜ ಪೂಜಾರ, ಕಂದಾಯ ನೀರೀಕ್ಷಕ ಪಾಟೀಲ, ರವಿ ಕುಂಬಾರ ಇದ್ದರು.