ಹಿರೇಉಳಿಗೇರಿಯಲ್ಲಿ ಸಂಭ್ರಮದ ಶಾಲಾ ಪ್ರಾರಂಭೋತ್ಸವ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ
A warm welcome to the students at the festive school commencement ceremony in Hireuligeri
ಸವದತ್ತಿ 01 : ತಾಲೂಕಿನ ಹಿರೇಉಳಿಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಅತ್ಯಂತ ಸಂಭ್ರಮ ಮತ್ತು ಸಡಗರದಿಂದ ಜರುಗಿತು.ಶಾಲಾ ಆವರಣವನ್ನು ಆಕರ್ಷಕವಾಗಿ ಸಿಂಗರಿಸಲಾಗಿತ್ತು. ಹೊಸ ಹುಮ್ಮಸ್ಸಿನೊಂದಿಗೆ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಮತ್ತು ಗ್ರಾಮಸ್ಥರು ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ. ಖಾಜಿ, ಶಾಲೆ ಎಂದರೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಪವಿತ್ರ ದೇವಾಲಯ. ಶಾಲೆ ಪ್ರತಿ ಮಗುವಿಗಾಗಿ ಎಂಬ ಸಂಕಲ್ಪದೊಂದಿಗೆ ಮಕ್ಕಳಲ್ಲಿ ಓದು ಬರಹದ ಅಡಿಪಾಯ ಗಟ್ಟಿಯಾಗಬೇಕು. ಶಿಕ್ಷಕರು ಮತ್ತು ಪಾಲಕರು ಜಂಟಿಯಾಗಿ ಶ್ರಮಿಸಿದರೆ ಮಾತ್ರ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯ, ಎಂದು ಅಭಿಪ್ರಾಯಪಟ್ಟರು. ಅಲ್ಲದೆ, ಶಾಲೆಯ ಸುಂದರ ಪರಿಸರ ಮತ್ತು ವ್ಯವಸ್ಥೆಯನ್ನು ಮೆಚ್ಚಿದ ಅವರು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಭಾಗವಹಿಸಿ ನಾಡಿನ ಕೀರ್ತಿ ಹೆಚ್ಚಿಸಬೇಕು ಎಂದು ಕಿವಿಮಾತು ಹೇಳಿದರು.
ತಾಪಂ ಇಒ ಆನಂದ ಬಡಕುಂದ್ರಿ ಮಾತನಾಡಿದ ಅವರು ಸರ್ಕಾರವು ಬಿಸಿಯೂಟ, ಸಮವಸ್ತ್ರ ಮತ್ತು ಪಠ್ಯಪುಸ್ತಕಗಳಂತಹ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ವಿದ್ಯಾರ್ಥಿಗಳು ಇವುಗಳನ್ನು ಸದುಪಯೋಗ ಪಡಿಸಿಕೊಂಡು, ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಭವಿಷ್ಯದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು. ಗುಣಮಟ್ಟದ ಶಿಕ್ಷಣಕ್ಕಾಗಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಸರ್ಕಾರ ಬದ್ಧವಾಗಿದೆ, ಎಂದರು.
ಕಾರ್ಯಕ್ರಮದ ಅಂಗವಾಗಿ ಸರ್ಕಾರದಿಂದ ಸಮವಸ್ತ್ರ ಮತ್ತು ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವ ಮೂಲಕ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಎಸ್.ಡಿ. ಮುದರಡ್ಡಿ, ಶಿಕ್ಷಕರಾದ ಅದೃಶ್ ಸುಣಗಾರ, ನಾಗರತ್ನ ಉಂಡಿ, ತುಳಸಮ್ಮ ದಾಸನಕೊಪ್ಪ, ಲಕ್ಷ್ಮೀ ಉಳಲ್ಲೋರ, ಮಂಜುನಾಥ ಸಂಗೊಳ್ಳಿ, ಎಸ್.ಎಲ್. ಅಲ್ಲೀಖಾನ, ಬಿ.ಬಿ. ಜಾಲಿಕಟ್ಟಿ, ಎಚ್.ಎಂ.ಪಡದಾರ,ಎಂ.ವಿ.ಶಿರೂರ, ಆರಿ್ಬ.ಪೋಳ,ಭಾರತಿ ಗುಡಿಮನಿ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಗ್ರಾಮದ ಹಿರಿಯರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 