ಯುವ ಬರಹಗಾರರ ಕೃತಿಗಳ ಲೋಕಾರೆ್ಣ
A world of works by young writers
ಕೊಲ್ಹಾರ 07: ಯುವ ಬರಹಗಾರರ ಕೃತಿಗಳ ಲೋಕಾರೆ್ಣ ಸಮಾರಂಭವು ಮಾರ್ಚ್ 10 ರಂದು ಮಂಗಳವಾರ ಬೆಂಗಳೂರು ನಗರದ ನಯನ ರಂಗಮಂದಿರದಲ್ಲಿ ನಡೆಯಲಿದೆ.ಈ ಸಂದರ್ಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ಯುವ ಬರಹಗಾರರ ಚೊಚ್ಚಲ ಕೃತಿಯ ಸಹಾಯಧನಕ್ಕೆ ಕೊಲ್ಹಾರ ಪಟ್ಟಣದ ಶ್ರೀಮತಿ ಕವಿತಾ ಅಜಯ್ ಮುದಕವಿಯವರ ‘ಹೂ ಮುಡಿದ ನಕ್ಷತ್ರಗಳು’ ಕವನ ಸಂಕಲನ ಆಯ್ಕೆಯಾಗಿದೆ.
ಮೂಲತಃ ಇಂಗ್ಲಿಷ್ ಭಾಷಾ ಶಿಕ್ಷಕಿಯಾಗಿರುವ ಅವರು, ನಿರೂಪಕಿ, ಲೇಖಕಿ ಹಾಗೂ ಉಪನ್ಯಾಸಕಿಯಾಗಿ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.ಕಾರ್ಯಕ್ರಮವನ್ನು ಖ್ಯಾತ ಲೇಖಕ ಹಾಗೂ ನಿರ್ದೇಶಕರಾದ ಡಾ. ನಾಗತಿಹಳ್ಳಿ ಚಂದ್ರಶೇಖರ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಖ್ಯಾತ ಕವಿ ಶ್ರೀ ಸತೀಶ್ ಕುಲಕರ್ಣಿ ಹಾಗೂ ಡಾ. ಬಿ.ಎಸ್. ಮಂಜುನಾಥಸ್ವಾಮಿ (ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ) ಭಾಗವಹಿಸಲಿದ್ದಾರೆ. ಅಧ್ಯಕ್ಷತೆಯನ್ನು ಡಾ. ಮಾನಸ, ಅಧ್ಯಕ್ಷರು ಕನ್ನಡ ಪುಸ್ತಕ ಪ್ರಾಧಿಕಾರ ವಹಿಸಲಿದ್ದಾರೆ. ಕೊಲ್ಹಾರ ಪಟ್ಟಣದ ಯುವ ಪ್ರತಿಭೆಗೆ ದೊರೆತ ಈ ರಾಜ್ಯಮಟ್ಟದ ಗೌರವ ಸಾಹಿತ್ಯಾಸಕ್ತರಲ್ಲಿ ಸಂತಸ ಮೂಡಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 