ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

ಲೋಕದರ್ಶನ ವರದಿ 

ಮುಂಡಗೋಡ:ತಾಲೂಕಿನ ಸಾಲಗಾಂವ ಗ್ರಾಮದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.   

ವೀರೇಂದ್ರ ಏಶಪ್ಪನವರ(20) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತನು ಮದ್ಯ ವ್ಯಸನಿಯಾಗಿದ್ದನು ಎನ್ನಲಾಗಿದ್ದು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.