ಬೈಲಹೊಂಗಲ

ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಲೋಕದರ್ಶನ ವರದಿ 

ಬೈಲಹೊಂಗಲ 03: 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿಯಿರುವ ವಿದ್ಯಾರ್ಥಿವೇತನ ಕೂಡಲೇ ಬಿಡುಗಡೆ ಮಾಡುವಂತೆ, ಯುಯುಸಿಎಂಎಸ್ ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶವನ್ನು ಪ್ರಕಟಿಸುವಂತೆ ಆಗ್ರಹಿಸಿ ಎಬಿವಿಪಿಯಿಂದ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 

    ಪಟ್ಟಣದ ಅಂಬೇಡ್ಕರ ಉದ್ಯಾನವನದಿಂದ ಪ್ರತಿಭಟಣಾ ಮೆರವಣಿಗೆ ಗೊಂಬಿಗುಡಿ, ಜವಳಿಕೂಟ, ಬಜಾರ ರಸ್ತೆ, ರಾಯಣ್ಣ ವೃತ್ತ ಮಾರ್ಗವಾಗಿ ಉಪವಿಭಾಗಾಧಿಕಾರಿಗಳ ಕಚೇರಿ ತಲುಪಿತು. 

    ಎಬಿವಿಪಿ ಸಂಚಾಲಕ ಅಪ್ಪಣ್ಣ ಹಡಪದ ಮಾತನಾಡಿ, ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ವಿದ್ಯಾರ್ಥಿವೇತನದಿಂದ ಬರುವ ಹಣವನ್ನು ಪೂರಕವಾಗಿ ಬಳಸುತ್ತಿದ್ದರು. ವಿದ್ಯಾರ್ಥಿಗಳು ಈ ಸಾರಿ ಅರ್ಜಿ ಸಲ್ಲಿಸಿದರೂ ವಿದ್ಯಾರ್ಥಿವೇತನ ಬಂದಿಲ್ಲ. ಸರ್ಕಾರ ಹೇಳುತ್ತೆ ವಿದ್ಯಾರ್ಥಿ ವೇತನ ಬಂದಿರುವುದಿಲ್ಲ. ಕೂಡಲೇ ಸರ್ಕಾರ ವಿದ್ಯಾರ್ಥಿವೇತನ ಬಿಡುಗಡೆಗೊಳಿಸಬೇಕು ಇಲ್ಲದಿದ್ದರೇ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗವುದು ಎಂದರು. 

   ಎಇಪಿ ಜಾರಿಯಾದ ನಂತರ ಎಲ್ಲ ವಿಶ್ವವಿದ್ಯಾಲಯಗಳು ಯುಯುಸಿಎಂಎಸ್ ತಂತ್ರಾಂಶ ಬಳಿಸಿ ಎಲ್ಲ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ಅದನ್ನು ಸರಿಪಡಿಸುವಂತೆ ಆಗ್ರಹಿಸಿದ್ದಾರೆ. 

  ಎಬಿವಿಪಿ ಕಾರ್ಯದರ್ಶಿ ಗಂಗಾಧರ ಕರೇಪ್ಪಗೊಳ ಸೇರಿದಂತೆ ವಿದ್ಯಾರ್ಥಿ, ವಿದ್ಯಾರ್ಥಿನಿಯರು  ಇದ್ದರು. 


ಸುದ್ದಿ ಓದಿ