ತಿರಂಗಾ ಯಾತ್ರೆ ಮೂಲಕ ದೇಶಭಕ್ತಿ ಸಂದೇಶ ಸಾರಿದ ಎಬಿವಿಪಿ ವಿದ್ಯಾರ್ಥಿಗಳು
ABVP students spread the message of patriotism through the Tiranga Yatra
ಲೋಕದರ್ಶನ ವರದಿ
ಬಳ್ಳಾರಿ, ಆ.12: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬಳ್ಳಾರಿ ಮಹಾನಗರ ಘಟಕದ ವತಿಯಿಂದ ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭಗೊಂಡ ತಿರಂಗಾ ಯಾತ್ರೆ ಬೆಂಗಳೂರು ರಸ್ತೆ ಮಾರ್ಗವಾಗಿ ರಾಯಲ್ ಸರ್ಕಲ್ ಮೂಲಕ ಮೋತಿ ಸರ್ಕಲ್ವರೆಗೆ ನಡೆಯಿತು.
ನೂರಾರು ವಿದ್ಯಾರ್ಥಿಗಳು ಹಾಗೂ ಯುವಕರು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಶಿಸ್ತುಬದ್ಧವಾಗಿ ಯಾತ್ರೆಯಲ್ಲಿ ಪಾಲ್ಗೊಂಡರು. ಯಾತ್ರೆಯುದ್ದಕ್ಕೂ ‘ಭಾರತ್ ಮಾತಾ ಕೀ ಜೈ’, ‘ವಂದೇ ಮಾತರಂ’ ಸೇರಿದಂತೆ ದೇಶಭಕ್ತಿ ಘೋಷಣೆಗಳು ಮೊಳಗಿದವು. ಸುಮಾರು 450 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ ಯಾತ್ರೆಯ ಪ್ರಮುಖ ಆಕರ್ಷಣೆಯಾಗಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ತ್ರಿವರ್ಣ ಧ್ವಜ ರಾರಾಜಿಸುತ್ತಿದ್ದ ದೃಶ್ಯ ಕಂಡುಬಂದಿತು.
ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಕೇಂದ್ರ ಕಾರ್ಯಸಮಿತಿ ಸದಸ್ಯ ಸಚಿನ್ ಕುಳಗೇರಿ, “ರಾಷ್ಟ್ರಧ್ವಜ ಕೇವಲ ಒಂದು ಧ್ವಜವಲ್ಲ; ಅದು ದೇಶದ ಸ್ವಾಭಿಮಾನ, ಸಾರ್ವಭೌಮತ್ವ, ಏಕತೆ ಮತ್ತು ಅಖಂಡತೆಯ ಸಂಕೇತ. ವಿದ್ಯಾರ್ಥಿಗಳು ದೇಶದ ಇತಿಹಾಸ, ಸ್ವಾತಂತ್ರ್ಯ ಹೋರಾಟ ಹಾಗೂ ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರ ಆದರ್ಶಗಳನ್ನು ತಿಳಿದುಕೊಳ್ಳಬೇಕು” ಎಂದು ಹೇಳಿದರು.
ಸ್ವಾತಂತ್ರ್ಯವನ್ನು ಕೇವಲ ಆಚರಿಸುವುದಷ್ಟೇ ಅಲ್ಲದೆ, ದೇಶದ ಏಕತೆ ಮತ್ತು ಅಖಂಡತೆಯನ್ನು ಕಾಪಾಡುವ ಜವಾಬ್ದಾರಿಯನ್ನು ಯುವಜನತೆ ಹೊತ್ತುಕೊಳ್ಳಬೇಕು. ಜಾತಿ, ಭಾಷೆ, ಪ್ರದೇಶ ಸೇರಿದಂತೆ ಎಲ್ಲ ಭೇದಗಳನ್ನು ಮೀರಿ ರಾಷ್ಟ್ರೀಯ ಏಕತೆಯನ್ನು ಬಲಪಡಿಸುವ ಕಾರ್ಯದಲ್ಲಿ ವಿದ್ಯಾರ್ಥಿಗಳು ಮುಂಚೂಣಿಯಲ್ಲಿ ನಿಲ್ಲಬೇಕು ಎಂದರು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಹ ಕಾರ್ಯವಾಹ ಟಿ. ಪ್ರಸನ್ನ ಮಾತನಾಡಿ, ದೇಶದ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ದೇಶದ ಬಗ್ಗೆ ಗೌರವ ಮತ್ತು ರಾಷ್ಟ್ರೇ್ರಮವನ್ನು ಬೆಳೆಸಿಕೊಂಡು ಮುಂದಿನ ಪೀಳಿಗೆಗೆ ಅದನ್ನು ಉಳಿಸಿಕೊಡಬೇಕು ಎಂದು ಕರೆ ನೀಡಿದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 