ಭ್ರಷ್ಟ ಪೊಲೀಸ್ ಅಧಿಕಾರಿಗಳ ಮೇಲೆ ಎಸಿಬಿ ದಾಳಿ
ಬೆಂಗಳೂರು, ಮೇ 22,ಬೆಳ್ಳಂಬೆಳಗ್ಗೆ ಭ್ರಷ್ಟ ಪೊಲೀಸ್ ಅಧಿಕಾರಿಗಳ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಎಸಿಪಿ ಪ್ರಭುಶಂಕರ್, ಇನ್ಸ್ ಪೆಕ್ಟರ್ ಆರ್ ಎಂ ಅಜಯ್, ನಿರಂಜನ್ ಕುಮಾರ್ ಮನೆಗಳ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸಿಗರೇಟ್ ವಿತರಕರು ಮತ್ತು ನಕಲಿ ಮಾಸ್ಕ್ ಮಾರಾಟಗಾರರಿಂದ ಕೊಟ್ಯಂತರ ರೂ. ಲಂಚ ಪಡೆದ ಆರೋಪದಡಿ ದಾಳಿ ನಡೆಸಲಾಗಿದೆ.ಸಹಕಾರ ನಗರದ ಎಸಿಪಿ ಪ್ರಭುಶಂಕರ್ ಮನೆ ಸೇರಿ ನಗರದ ಏಳು ಕಡೆ ಡಿಎಸ್ ಪಿ ರಾಜೇಂದ್ರ ನೇತೃತ್ವದ ತಂಡ ದಾಳಿ ನಡೆಸಿದೆ.ಲಾಕ್ ಡೌನ್ ನಡುವೆ ಸಿಸಿಬಿಯ ಈ ಮೂವರು ಭ್ರಷ್ಟ ಅಧಿಕಾರಿಗಳು ಕೋಟಿ ಕೋಟಿ ಡೀಲ್ ನಡೆಸಿದ್ದರು. ಅಕ್ರಮವಾಗಿ ಸಿಗರೇಟ್ ಮಾರಾಟಕ್ಕೆ ಅನುಮತಿ ನೀಡಿ ಲಂಚ ಪಡೆದಿದ್ದರು. ಡೀಲ್ ವ್ಯವಹಾರ ಬಯಲಿಗೆ ಬರುತ್ತಿದ್ದಂತೆ ಮೂವರು ಸಿಸಿಬಿ ಅಧಿಕಾರಿಗಳನ್ನು ಅಮಾನತು ಮಾಡಿ, ಬಳಿಕ ಪ್ರಕರಣದ ತನಿಖೆಯನ್ನು ಎಸಿಬಿಗೆ ವರ್ಗಾಯಿಸಲಾಗಿತ್ತು.ಗುರುವಾರವಷ್ಟೇ ಲಂಚ ಪಡೆದ ಆರೋಪದಡಿ ಮೂವರು ಭ್ರಷ್ಟ ಅಧಿಕಾರಿಗಳ ವಿರುದ್ಧ ಎಸಿಬಿ ಮೂರು ಪ್ರತ್ಯೇಕ ಎಫ್.ಐ.ಆರ್ ದಾಖಲಿಸಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 