ಎತ್ತಿನ ಬಂಡಿಗೆ ಬೈಕ್ ಡಿಕ್ಕಿ: ದಂಪತಿ ಸಾವು
ಬಳ್ಳಾರಿ, ಜ.4 : ಎತ್ತಿನ ಗಾಡಿಗೆ ಬೈಕ್ ವೊಂದು ಡಿಕ್ಕಿಯಾದ ಪರಿಣಾಮ ದಂಪತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಬೆನಕನಹಳ್ಳಿ ಬಳಿ ಸೋಮವಾರ ಬೆಳಗ್ಗೆ ಸಂಭವಿಸಿದೆ.ನಿವೇದಿತಾ(23), ಶಿವಕುಮಾರ್(34) ಮೃತ ದಂಪತಿ.ಜಗಳೂರು ತಾಲ್ಲೂಕಿನ ಹೊಸಕೆರೆಯಿಂದ- ಸಂಡೂರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಈ ಅಪಘಾತ ಸಂಭವಿಸಿದೆ.
ದಂಪತಿ ಹೊರಟ್ಟಿದ್ದ ದ್ವಿಚಕ್ರ ವಾಹನವು ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಗಾಡಿಯ ಮುಂಭಾಗದ ಕಬ್ಬಿಣದ ಸಲಕೆ ಇಬ್ಬರಿಗೂ ಎದೆಗೆ ಹೊಕ್ಕಿದೆ. ಪರಿಣಾಮ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ನಿವೇದಿತಾ ಅವರ ತವರು ಮನೆ ಜಗಳೂರು ತಾಲ್ಲೂಕಿನ ಹೊಸಕೆರೆಯಿಂದ ಶಿವಕುಮಾರ್ ಅವರ ಸ್ವಗ್ರಾಮ ಸಂಡೂರಿಗೆ ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.ಘಟನೆಗೆ ಸಂಬಂಧಿಸಿದಂತೆ ಕೊಟ್ಟೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.