ಜೈನ್ ಹೆರಿಟೇಜ್ ಸ್ಕೂಲ್ನಲ್ಲಿ ಎಐ ಆಧಾರಿತ ಇನೋವೇಶನ್ ಮತ್ತು ಸ್ಕಿಲ್ ಲ್ಯಾಬ್ ಉದ್ಘಾಟನೆ
AI-based Innovation and Skill Lab inaugurated at Jain Heritage School
ಬೆಳಗಾವಿ, ಜೂನ್ 2: ತಂತ್ರಜ್ಞಾನ ಆಧಾರಿತ ಶಿಕ್ಷಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ನಗರದ ಉದ್ಯಮಬಾಗದಲ್ಲಿರುವ ಜೈನ್ ಹೆರಿಟೇಜ್ ಸ್ಕೂಲ್ನಲ್ಲಿ ಸ್ಥಾಪಿಸಲಾಗಿರುವ ಅತ್ಯಾಧುನಿಕ ಕೃತಕ ಬುದ್ಧಿಮತ್ತೆ ಆಧಾರಿತ ಇನೋವೇಶನ್ ಮತ್ತು ಸ್ಕಿಲ್ ಲ್ಯಾಬ್ ಅನ್ನು ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್ ಅವರು ಸೋಮವಾರ ಉದ್ಘಾಟಿಸಿದರು. ಶಾಲೆಯ ಆರಂಭೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿಲ್ಲಾಧಿಕಾರಿಗಳು, ನೂತನ ಲ್ಯಾಬ್ನ ವಿವಿಧ ವಿಭಾಗಗಳನ್ನು ವೀಕ್ಷಿಸಿ ಅದರಲ್ಲಿರುವ ತಂತ್ರಜ್ಞಾನ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಕಲಿಕೆ ಮತ್ತು ನವೋದ್ಯಮ ಚಿಂತನೆ ಬೆಳೆಸಲು ಈ ಲ್ಯಾಬ್ ಮಹತ್ವದ ಪಾತ್ರ ವಹಿಸಲಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಶನ್, ಇಂದಿನ ಜಗತ್ತಿನಲ್ಲಿ ಕೃತಕ ಬುದ್ಧಿಮತ್ತೆ, ರೊಬೋಟಿಕ್ಸ್, ಮೆಷಿನ್ ಲರ್ನಿಂಗ್ ಹಾಗೂ ಡಿಜಿಟಲ್ ತಂತ್ರಜ್ಞಾನಗಳು ಪ್ರತಿಯೊಂದು ಕ್ಷೇತ್ರದಲ್ಲೂ ಅನಿವಾರ್ಯವಾಗಿವೆ. ಇಂತಹ ತಂತ್ರಜ್ಞಾನಗಳ ಅರಿವು ಮತ್ತು ಪ್ರಾಯೋಗಿಕ ಅನುಭವ ವಿದ್ಯಾರ್ಥಿಗಳಿಗೆ ಚಿಕ್ಕ ವಯಸ್ಸಿನಲ್ಲಿಯೇ ದೊರೆತರೆ ಅವರು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸಜ್ಜಾಗುತ್ತಾರೆ ಎಂದು ಹೇಳಿದರು.“ಮುಂದಿನ ದಿನಗಳಲ್ಲಿ ಉದ್ಯೋಗ, ಕೈಗಾರಿಕೆ, ಆರೋಗ್ಯ, ಕೃಷಿ, ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಎಐ ಪ್ರಮುಖ ಪಾತ್ರ ವಹಿಸಲಿದೆ. ವಿದ್ಯಾರ್ಥಿಗಳು ಈ ತಂತ್ರಜ್ಞಾನವನ್ನು ಕೇವಲ ಬಳಸುವವರಾಗಿರದೆ,
ಹೊಸ ಆವಿಷ್ಕಾರಗಳನ್ನು ಮಾಡುವವರಾಗಬೇಕು. ಅದಕ್ಕಾಗಿ ಇಂತಹ ಅತ್ಯಾಧುನಿಕ ಲ್ಯಾಬ್ಗಳ ಅಗತ್ಯವಿದೆ. ಜೈನ್ ಹೆರಿಟೇಜ್ ಸ್ಕೂಲ್ ಈ ನಿಟ್ಟಿನಲ್ಲಿ ಉತ್ತಮ ಹೆಜ್ಜೆ ಇಟ್ಟಿದ್ದು, ಬೆಳಗಾವಿಯ ಮಕ್ಕಳಿಗೆ ಭವಿಷ್ಯದ ತಂತ್ರಜ್ಞಾನ ಜಗತ್ತಿನ ಬಾಗಿಲನ್ನು ತೆರೆದಿದೆ,” ಎಂದು ಹೇಳಿದರು.ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಕ್ಲಸ್ಟರ್ ಮ್ಯಾನೇಜರ್ ವೆಂಕಟೇಶ ದೇಶಪಾಂಡೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಸಮಸ್ಯೆ ಪರಿಹಾರ ಕೌಶಲ್ಯ ಹಾಗೂ ತಾಂತ್ರಿಕ ಜ್ಞಾನವನ್ನು ಬೆಳೆಸುವಲ್ಲಿ ಇಂತಹ ಲ್ಯಾಬ್ಗಳು ಅತ್ಯಂತ ಪರಿಣಾಮಕಾರಿ ಎಂದು ಹೇಳಿದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 