ಎಐಡಿಎಸ್‌ಒ ನಿಂದ ವಿದ್ಯಾರ್ಥಿಗಳಿಗೆ ನೂತನ ಶೈಕ್ಷಣಿಕ ವರ್ಷಕ್ಕೆ ಸ್ವಾಗತ!
AIDSSO welcomes students to the new academic year!
ಲೋಕದರ್ಶನ ವರದಿ
ಧಾರವಾಡ 01 : ಇಂದು ಎಐಡಿಎಸ್‌ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯಿಂದ ಖಾನಾಪುರ, ತಡಕೋಡ ಹರಿಜನ್ ಕೇರಿ, ನವಲೂರು ಹರಿಜನ ಕೇರಿ, ನವಲೂರು ಚಾವಣಿ, ಸಿದ್ದೇಶ್ವರ ನಗರ, ಬೆಳ್ಳಿಗಟ್ಟಿ, ಲಾಳಗಟ್ಟಿ ಸೇರಿದಂತೆ ಹಲವಾರು ಸರ್ಕಾರಿ ಕಿರಿಯ ಹಾಗೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ರ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳನ್ನು ಸ್ವಾಗತಿಸಲಾಯಿತು. ಪೋಷಕರು ಹಾಗೂ ವಿದ್ಯಾರ್ಥಿಗಳು ಸೇರಿ ನಮ್ಮೂರ ಶಾಲೆ ‘ನಮ್ಮಯ ಕಣ್ಮಣಿ’ ಎಂಬ ಬ್ಯಾನರ್ ಹಿಡಿದು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿಗಳಾದ ಶಶಿಕಲಾ ಮೇಟಿ ವಿದ್ಯಾರ್ಥಿಗಳನ್ನು ಸ್ವಾಗತಿಸಿ ಮಾತನಾಡಿ, “ನಮ್ಮ ದೇಶದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯಬೇಕೆಂದು ಜ್ಯೋತಿಬಾಪುಲೆ ಸಾವಿತ್ರಿಬಾಯಿ ಪುಲೆ ಈಶ್ವರ ಚಂದ್ರ ವಿದ್ಯಾಸಾಗರ್ ಪಂಡಿತ್ ಮುಂತಾದವರು ಶ್ರಮಿಸಿದರು. ಅವರ ಹೋರಾಟದ ಫಲವಾಗಿ ಇಂದು ಎಲ್ಲರಿಗೂ ಶಿಕ್ಷಣ ದೊರೆಯುತ್ತಿದೆ. ಆದರೆ ಶಿಕ್ಷಣವನ್ನು ಖಾತ್ರಿ ಎಲ್ಲರಿಗೂ ಖಾತ್ರಿ ಪಡಿಸಬೇಕಿದ್ದ ಸರ್ಕಾರವೇ ಇಂದು ಶಾಲೆಗಳನ್ನು ಮುಚ್ಚುತ್ತಿದೆ. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯಡಿ ಸಾವಿರಾರು ಶಾಲೆಗಳನ್ನು ಮುಚ್ಚಲಾಗುತ್ತಿದೆ.
ಧಾರವಾಡ ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲು ಮುಂದಾಗಿತ್ತು. ಆದರೆ ಎಐಡಿಎಸ್‌ಒ ಹಾಗೂ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ನಡೆದ ಹೋರಾಟದ ಫಲವಾಗಿ ಇಂದು ಶಾಲೆ ಉಳಿದು ಪ್ರಾರಂಭೋತ್ಸವ ನಡೆಸಲಾಗುತ್ತಿದೆ ಎಂದು ಹೇಳಿ ಎಲ್ಲ ಪಾಲಕರು ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಧಾರವಾಡ ಜಿಲ್ಲಾಧ್ಯಕ್ಷರಾದ ಮಲ್ಲೇಶ್ ಕಟಗಿ ಮಾತನಾಡಿ, ಹೋರಾಟದಿಂದಾಗಿ ನಮ್ಮೂರಿನ ಶಾಲೆಗಳು ಉಳಿದಿವೆ. ಮುಂದೆ ಈ ಶಾಲೆಗಳು ವೀಲೀನಗೊಳ್ಳದಂತೆ ರಕ್ಷಿಸಿ ಬಲಪಡಿಸುವ ನಮ್ಮ ಸಂಘಟಿತ ಪ್ರಯತ್ನ ಮುಂದುವರಿಯುತ್ತದೆ. ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷರಾದ ಸಿಂಧೂ ಕೌದಿ ಪೋಷಕರಾದ ರಾಯಪ್ಪ ಅಬ್ಬಾರ್, ಈರ್ಪ ಮೇಲಿನಮನಿ, ರಾಜು ಬಾದಾಗಿ, ಬಸವರಾಜ್ ಹರಿಜನ್, ಫಕೀರ್ಪ ಕೆ, ಕರಿಬಸಪ್ಪ, ಶಿವಾಜಿ ಸೂರ್ಯವಂಶಿ, ಮುಂತಾದ ಪಾಲಕರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 