ಕೆಪಿಎಸ್ಸಿ ನಡೆಸಿದ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಎಐಡಿವೈಒ ಖಂಡನೆ
AIDYO condemns the alleged scam in the recruitment of 384 gazetted probationers posts conducted by K
ಕೊಪ್ಪಳ 07: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) 2023-24ನೇ ಸಾಲಿನ 384 ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗಾಗಿ 2025ರ ಫೆ.13ರಂದು ಅಧಿಸೂಚನೆ ಹೊರಡಿಸಿ. ಕಳೆದ ಮೇ ತಿಂಗಳಲ್ಲಿ ಪರೀಕ್ಷೆ ನಡೆಸಿತ್ತು. ಈಗ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ. ಉಳಿಕೆ ಮೂಲ ವೃಂದದಲ್ಲಿ 930 ಹಾಗೂ ಹೈದರಾಬಾದ್- ಕರ್ನಾಟಕ ವೃಂದದಲ್ಲಿ 222 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಅರ್ಹರೆಂದು ಕೆಪಿಎಸ್ಸಿ ಘೋಷಿಸಿದೆ. ಆದರೆ ಒಂದೇ ಬ್ಲಾಕ್ನ ಹತ್ತಾರು ಅಭ್ಯರ್ಥಿಗಳು ಅರ್ಹತೆ ಪಡೆದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಪತ್ರಿಕೆಗಳಲ್ಲಿ ವರದಿಯಾಗಿದೆ.
ಈ ನೇಮಕಾತಿಯ ಪರೀಕ್ಷೆಯ ಸಂದರ್ಭದಲ್ಲಿ ಕನ್ನಡ ಮಾಧ್ಯಮದ ಪ್ರಶ್ನೆ ಪತ್ರಿಕೆ ಸಮಂಜಸವಾಗಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು. ಈಗ ಫಲಿತಾಂಶದ ಬಗ್ಗೆಯೂ ಅನುಮಾನಗಳಿವೆ. ಕೆಪಿಎಸ್ಸಿ ನಡೆಸುವ ಎಲ್ಲಾ ನೇಮಕಾತಿ ಪ್ರಕ್ರಿಯೆಗಳಲ್ಲೂ ಹೀಗೆ ಒಂದಲ್ಲ ಒಂದು ರೀತಿಯ ಭ್ರಷ್ಟಾಚಾರದ ಆರೋಪಗಳು ಕೇಳಿಬರುತ್ತಲೇ ಇವೆ. ಹಗರಣಗಳಿಂದಲೇ ಕುಖ್ಯಾತವಾಗಿರುವ ಕೆಪಿಎಸ್ಸಿಯ ಮುಡಿಗೆ ಮತ್ತೊಂದು ಅಪಖ್ಯಾತಿಯ ಗರಿ ಇದಾಗಿದೆ.ಮರಳುಗಾಡಿನಲ್ಲಿನ ಓಯಸಿಸ್ನಂತೆ ತೀರಾ ಅಪರೂಪಕ್ಕೆ ನಡೆಯುವ ನೇಮಕಾತಿಗಳಲ್ಲಿಯೂ ಈ ರೀತಿ ಭ್ರಷ್ಟಾಚಾರ, ಹಗರಣಗಳೇ ತುಂಬಿ ತುಳುಕುತ್ತಿವೆ.
ಇದು ನಿರುದ್ಯೋಗದ ಬೇಗೆಯಲ್ಲಿ ಬೇಯುತ್ತಿರುವ ಉದ್ಯೋಗಾಕಾಂಕ್ಷಿ ಯುವಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ. ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿಯೇ ಪಿ. ಸಿ. ಹೋಟಾ ಸಮಿತಿ ನೀಡಿರುವ ಶಿಫಾರಸುಗಳನ್ನು ಜಾರಿಗೊಳಿಸುವ ಪ್ರಯತ್ನವನ್ನು ಎಲ್ಲಾ ಸರ್ಕಾರಗಳು ಕೈ ಬಿಟ್ಟಿವೆ. ತತ್ಪಲವಾಗಿ ಪ್ರತಿಯೊಂದು ನೇಮಕಾತಿ ಪ್ರಕ್ರಿಯೆಯಲ್ಲಿಯೂ ಒಂದಲ್ಲ ಒಂದು ಆರೋಪಗಳು ಹಗರಣಗಳು ಬಯಲಿಗೆ ಬರುತ್ತಿವೆ. ಇದು ರಾಜ್ಯದ ಯುವಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ ಹಾಗೂ ಸರ್ಕಾರಿ ನೇಮಕಾತಿಗಳ ಬಗ್ಗೆ ಅವರಲ್ಲಿ ಭ್ರಮನಿರಸನವನ್ನುಂಟುಮಾಡುತ್ತಿದೆ.
ಇನ್ನು ಮುಂದೆ ಯಾವುದೇ ನೇಮಕಾತಿಗಳನ್ನು, ನಡೆಸಲು ಕೆಪಿಎಸ್ಸಿಗೆ ನೀಡಲೇಬಾರದು ಎಂಬ ಕೂಗು ಕೇಳಿ ಬರುತ್ತಿದೆ.ಆದ್ದರಿಂದ ಸರ್ಕಾರ ಈ ಪ್ರಕರಣದ ಸಮಗ್ರ ತನಿಖೆ ನಡೆಸಿ, ಹಗರಣ ನಡೆದಿರುವುದು ಸಾಬೀತಾದರೆ ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆ ನೀಡಬೇಕು ಹಾಗೂ ಕೆಪಿಎಸ್ಸಿಯಲ್ಲಿನ ಭ್ರಷ್ಟಾಚಾರವನ್ನು ನಿರ್ಮೂಲನೆಗೊಳಿಸಲು ಪಿ. ಸಿ. ಹೋಟಾ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಬೇಕು ಎಂದು ಎಐಡಿವೈಒ ಕೊಪ್ಪಳ ಜಿಲ್ಲಾ ಸಮಿತಿಯು ಆಗ್ರಹಿಸುತ್ತದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 