ಬಿ.ಜಿ ರಾಮ್ಜಿ ಕಾಯ್ದೆ ವಿರೋಧಿಸಿ ಎಐಕೆಕೆಎಂಎಸ್ ಪ್ರತಿಭಟನೆ
AIKKMS protests against B.G. Ramji Act
ಬಳ್ಳಾರಿ 20: ಎಐಕೆಕೆಎಂಎಸ್ ರೈತ ಸಂಘಟನೆ ವತಿಯಿಂದ ವಿ.ಬಿ.ಜಿ ರಾಮ್ಜಿ ಕಾಯ್ದೆ ರದ್ದತಿಗೆ ಹಾಗೂ ಮನರೇಗಾ ಯೋಜನೆಯನ್ನು ಮರುಜಾರಿಗೆ ತರಬೇಕೆಂದು ಆಗ್ರಹಿಸಿ ಕುರುಗೋಡು ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಪ್ರಧಾನಮಂತ್ರಿಗಳಿಗೆ ಉದ್ದೇಶಿಸಿದ ಮನವಿಯನ್ನು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡಿ, ವಿ.ಬಿ.ಜಿ ರಾಮ್ಜಿ ಕಾಯ್ದೆಯು ಬಡ ಕೂಲಿ ಕಾರ್ಮಿಕರಿಂದ ಉದ್ಯೋಗ ಕಸಿಯುವ ಕಾಯ್ದೆಯಾಗಿದ್ದು, ಕೆಲಸ ನೀಡುವಲ್ಲಿ ಗ್ರಾಮ ಪಂಚಾಯಿತಿಗಳಿಗೆ ಇದ್ದ ಅಧಿಕಾರವನ್ನು ರದ್ದುಪಡಿಸಲಾಗಿದೆ ಎಂದು ಆರೋಪಿಸಿದರು.
ಮುಂದಿನ ದಿನಗಳಲ್ಲಿ ಈ ಕಾರ್ಯದಲ್ಲಿ ಗುತ್ತಿಗೆದಾರರ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಯೋಜನೆ ರೂಪಿಸಲಾಗಿದ್ದು, ಇದು ದೊಡ್ಡ ಷಡ್ಯಂತ್ರವಾಗಿದೆ ಎಂದು ದೂರಿದರು. ರಾಜ್ಯ ಸಮಿತಿ ಸದಸ್ಯ ಈ. ಹನುಮಂತಪ್ಪ ಮಾತನಾಡಿ, ರಾಜ್ಯ ಸರ್ಕಾರವು ಕೇವಲ ಕೇಂದ್ರ ಸರ್ಕಾರದ ಮೇಲೆ ಜವಾಬ್ದಾರಿ ಹಾಕದೇ, ರಾಜ್ಯದ ಜನರಿಗೆ ಉದ್ಯೋಗ ಒದಗಿಸಲು ತಾವೂ ಮುಂದಾಗಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆ ವೇಳೆ “ನರೇಗಾ ಉಳಿಸಿ ತಾಲ್ಲೂಕು ಸಮಿತಿ” ರಚಿಸಲಾಯಿತು. ಸಮಿತಿಯ ಅಧ್ಯಕ್ಷರಾಗಿ ಕಲ್ಲುಕಂಬ ಪಂಪಾಪತಿ, ಉಪಾಧ್ಯಕ್ಷರಾಗಿ ಮುಷ್ಟಗಟ್ಟ ಪಂಪನಗೌಡ ಹಾಗೂ ಕಲ್ಲುಕಂಬ ಮಾರೆಪ್ಪ, ಕಾರ್ಯದರ್ಶಿಯಾಗಿ ಕೇರೇಕೆರೆ ಬಸವರಾಜ್ ಆಯ್ಕೆಯಾದರು.
ಜೊತೆಗೆ 5 ಜನ ಜಂಟಿ ಕಾರ್ಯದರ್ಶಿಗಳು ಹಾಗೂ 23 ಸದಸ್ಯರ ಬಲಿಷ್ಠ ಸಮಿತಿಯನ್ನು ರಚಿಸಲಾಯಿತು.ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ್ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಜನ ಸಂಘಟನೆ ಎಐಡಿವೈಒ ಜಿಲ್ಲಾ ಅಧ್ಯಕ್ಷ ಕೋಳೂರು ಪಂಪಾಪತಿ ಸಹ ಮಾತನಾಡಿದರು.ಈ ಸಂಧರ್ಭದಲ್ಲಿ ತಾಲ್ಲೂಕು ಕಾರ್ಯದರ್ಶಿ ಕೇರೇಕೆರೆ ಬಸವರಾಜ್, ಜಿಲ್ಲಾ ಸಮಿತಿ ಸದಸ್ಯ ಮಾರೆಪ್ಪ, ರೈತರಾದ ಕಾಲಿಂಗಪ್ಪ, ಹನುಮಂತಪ್ಪ, ಪಂಪನಗೌಡ, ಶಿವಪ್ಪ, ರುದ್ರಮ್ಮ, ರತ್ನಮ್ಮ, ವೀರೇಶ್, ಅಂಬರೀಷ್, ದೊಡ್ಡಬಸವ, ವೆಂಕಟೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 