ಮನರಂಜನೆ

ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲಾಗಿದ್ದೇಕೆ?

ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲಾಗಿದ್ದೇಕೆ?

ಮುಂಬೈ ಜ 19:ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಆಸ್ಪತ್ರೆಗೆದಾಖಲಾಗಿದ್ದರಂತೆ.  ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ 'ಗಂಗೂಬಾಯಿ ಕಥಿಯಾವಾಡಿ' ಸಿನಿಮಾ ಚಿತ್ರೀಕರಣದಲ್ಲಿ ನಿರತರಾಗಿದ್ದಾಗ ಅಸ್ವಸ್ಥರಾದ ಕಾರಣ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆಯಂತೆ. ಅಲಿಯಾ ಆಸ್ಪತ್ರೆಗೆ ದಾಖಲಾಗಿದ್ದಕ್ಕೆ ಕಾರಣ ಅತಿಯಾದ ಅಸಿಡಿಟಿಯಂತೆ.  ಅಸಿಡಿಟಿಯಿಂದಾಗಿ ತಲೆಸುತ್ತು ಬಂದು ವಾಂತಿಯಾದ ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಂತರ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ.ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದರಾದರೂ, ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.   “ತುಂಬಾ ವೃತ್ತಿಪರರಾಗಿರುವ ಅಲಿಯಾ ಭಟ್ ನಿರಂತರ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಮನೆಗೆ ಮರಳಿರುವ ಅಲಿಯಾ, ಇವತ್ತಿನಿಂದ ಮತ್ತೆ ಚಿತ್ರೀಕರಣಕ್ಕೆ ಹಾಜರಾಗುತ್ತಿದ್ದಾರೆ' ಎಂದು ಆಂಗ್ಲ ವೆಬ್ ಪೋರ್ಟಲ್ ವರದಿ ಮಾಡಿದೆ. 

  


ಸುದ್ದಿ ಓದಿ