ಮನರಂಜನೆ

ಕೋವಿಡ್ ಸೋಂಕು : ಸಂಗೀತ ಸಂಯೋಜಕ ಅರ್ಜುನ್ ಜನ್ಯ ಗೆ ಚಿಕಿತ್ಸೆ

ಕೋವಿಡ್ ಸೋಂಕು : ಸಂಗೀತ ಸಂಯೋಜಕ ಅರ್ಜುನ್ ಜನ್ಯ ಗೆ ಚಿಕಿತ್ಸೆ

ಬೆಂಗಳೂರು, ಏಪ್ರಿಲ್ 09: ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. 'ತಡವಾಗಿ ಕೊರೋನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದೇನೆ' ಎಂದು ತಿಳಿಸಿದ್ದಾರೆ.ಸುರಕ್ಷತಾ ಪ್ರೋಟೋಕಾಲ್ ಅನುಸರಿಸಿದ್ದೇವೆ, ತುಂಬಾ ಜಾಗರೂಕರಾಗಿ ಇದ್ದರೂ ಸಹ ಹೇಗೆ ಕೊರೊನಾ ವೈರಸ್ ಬಂದಿದೆ ಎಂದು ತಿಳಿದಿಲ್ಲ.  ಶೀಘ್ರದಲ್ಲೇ ಚೇತರಿಸಿಕೊಂಡು ಮನೆಗೆ ಮರಳುತ್ತೇನೆ. ವೈದ್ಯರ ಸಲಹೆ ಮೇರೆಗೆ ಮತ್ತೆ ಕೆಲಸಕ್ಕೆ ತೆರಳುವುದಾಗಿ ಹೇಳಿದ್ದಾರೆ. ಕಳೆದ ವರ್ಷ ಅರ್ಜುನ್ ಜನ್ಯ ಅವರಿಗೆ ಲಘು ಹೃದಯಾಘಾತ ಸಂಭವಿಸಿದ್ದು, ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಘಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು. ಈ ಸುದ್ದಿ ಜನ್ಯ ಅಭಿಮಾನಿಗಳಿಗೆ, ಆಪ್ತರಿಗೆ ಮತ್ತು ಕುಟುಂಬದವರಿಗೆ ಶಾಕ್ ನೀಡಿತ್ತು. ಬಳಿಕ ಚೇತರಿಸಿಕೊಂಡು ಮತ್ತೆ ಕೆಲಸಕ್ಕೆ ಹಾಜರಾಗಿದ್ದರು.

  


ಸುದ್ದಿ ಓದಿ