ಆಧಾರ ಜೋಡಣೆ ಕಡ್ಡಾಯ
ಲೋಕದರ್ಶನ ವರದಿ
ಮುಂಡಗೋಡ: ತಾಲೂಕಿನ ರೈತರು ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆಯಡಿ 2022-23ನೇ ಸಾಲಿನ ಏಪ್ರಿಲ್-ಜುಲೈ ಚಾತುರ್ಮಾಸಿಕದಿಂದ ಆಧಾರ ಆಧಾರಿತ ಹಣ ಪಾವತಿ ಮಾಡುವುದರಿಂದ ಈಗಾಗಲೇ ತಾಲೂಕಿನಲ್ಲಿ ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆಯಡಿ ನೋಂದಣಿ ಮಾಡಿಕೊಂಡ ಅರ್ಹ ಫಲಾನುಭವಿ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಣೆ ಮಾಡಿಸುವುದು ಕಡ್ಡಾಯವಾಗಿರುತ್ತದೆ. ಆದ ಕಾರಣ ಆಧಾರ ಜೋಡಣೆಯಾಗದ ಅರ್ಹ ಫಲಾನುಭವಿಗಳ ರೈತರ ಯಾದಿಯನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಹಾಗೂ ಗ್ರಾಮ ಪಂಚಾಯತಗಳಲ್ಲಿ ಪ್ರದರ್ಶಿಸಲಾಗಿದ್ದು ಮಾ.31ರೊಳಗಾಗಿ ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಣೆ ಮಾಡಿಸಿ ಎನ್ಪಿಸಿಐ ಮ್ಯಾಪಿಂಗ್ ಮತ್ತು ಇಕೆವೈಸಿ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಭೇಟಿಯಾಗಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರಾದ ಎಮ್.ಎಸ್.ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.