1.70 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ
ಬೆಳಗಾವಿ : ಇಲ್ಲಿನ ಮಹಾನಗರ ಪಾಲಿಕೆ ವಾರ್ಡ ನಂಬರ 43 ರ ಭಾಗ್ಯನಗರ ಮೊದಲನೇ ಕ್ರಾಸದಲ್ಲಿ ದಕ್ಷಿಣ ಕ್ಷೇತ್ರದ ಶಾಸಕರಾದ ಅಭಯ ಪಾಟೀಲ ಅವರು 1 ಕೋಟಿ 17 ಲಕ್ಷ ರೂ. ಮೊತ್ತದ ಗಟಾರು ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆ ವಾರ್ಡಿನ ನಗರಸೇವಕಿ ವಾಣಿ ಜೋಶಿ ಸೇರಿದಂತೆ ಕೆಲವು ಪಾಲಿಕೆಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.