ವಿಜಯಪುರ

ಪಕ್ಷದ ವರಿಷ್ಠರ ಆದೇಶ ಪಾಲಿಸಿ: ಮಾಜಿ ಶಾಸಕ ಸುಣಗಾರಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಮಿತಿ ಅಸ್ತಿತ್ವದಲ್ಲಿಲ್ಲ; ಅನಗತ್ಯ ಗೊಂದಲ ಸೃಷ್ಟಿಸದಂತೆ ಕಾರ್ಯಕರ್ತರಿಗೆ ಸಲಹೆ

ಪಕ್ಷದ ವರಿಷ್ಠರ ಆದೇಶ ಪಾಲಿಸಿ: ಮಾಜಿ ಶಾಸಕ ಸುಣಗಾರಕ್ಷೇತ್ರದಲ್ಲಿ ಆಕಾಂಕ್ಷಿಗಳ ಸಮಿತಿ ಅಸ್ತಿತ್ವದಲ್ಲಿಲ್ಲ; ಅನಗತ್ಯ ಗೊಂದಲ ಸೃಷ್ಟಿಸದಂತೆ ಕಾರ್ಯಕರ್ತರಿಗೆ ಸಲಹೆ
Abide by the directives of the party leadership: Former MLA Sunagara. No committee of aspirants exis


              ದೇವರ ಹಿಪ್ಪರಗಿ 23: ದೇವರ ಹಿಪ್ಪರಗಿ ಮತಕ್ಷೇತ್ರದಲ್ಲಿ ಕೆಲವರು ಅನಾವಶ್ಯಕವಾಗಿ ಗೊಂದಲ ಸೃಷ್ಟಿಸುತ್ತಿದ್ದು, ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ವರಿಷ್ಠರ ಆದೇಶವನ್ನು ಪಾಲಿಸಬೇಕು ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಆಕಾಂಕ್ಷಿಗಳ ಸಮಿತಿ ಅಸ್ತಿತ್ವದಲ್ಲಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ.

              ಪಕ್ಷದ ಸಂಘಟನೆಯ ಜವಾಬ್ದಾರಿಯನ್ನು 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ, ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಅಧ್ಯಕ್ಷರು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇತರ ಸ್ಥಳೀಯ ಮುಖಂಡರು ನಿರ್ವಹಿಸಲಿದ್ದಾರೆ ಎಂದು ಕೆಪಿಸಿಸಿ ಹೊರಡಿಸಿರುವ ಆದೇಶ ಪತ್ರದಲ್ಲಿ ತಿಳಿಸಲಾಗಿದೆ.

             ಪಕ್ಷದ ಸಂಘಟನೆಯ ವಿಚಾರದಲ್ಲಿ ವರಿಷ್ಠರು ನೀಡಿರುವ ಸೂಚನೆಗಳೇ ಅಂತಿಮವಾಗಿದ್ದು, ಅನವಶ್ಯಕ ಗೊಂದಲ ಸೃಷ್ಟಿಸದೆ, ಕ್ಷೇತ್ರದಲ್ಲಿ ಯಾರ ನೇತೃತ್ವದಲ್ಲಿ ಪಕ್ಷದ ಸಭೆಗಳನ್ನು ನಡೆಸಲು ಕೆಪಿಸಿಸಿ ತಿಳಿಸಿದೆ. ವಿರೋಧ ಪಕ್ಷದವರಿಗೆ ಆಹಾರವಾಗದೇ, ಒಗ್ಗಟ್ಟಿನಲ್ಲಿ ಪಕ್ಷ ಸಂಘಟಿಸುವ ಮೂಲಕ ಬರುವಂತ ಚುನಾವಣೆಗಳಲ್ಲಿ ಬರುವಂತ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸೋಣ.                                   ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಒಳಗಾಗದೆ ಪಕ್ಷದ ಶಿಸ್ತು ಮತ್ತು ನಿರ್ದೇಶನಗಳನ್ನು ಪಾಲಿಸಬೇಕು. ಸದ್ಯ ಆರೋಗ್ಯ ಸಮಸ್ಯೆಯ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿದ್ದು, ಅಲ್ಲಿಂದ ಮರಳಿದ ಬಳಿಕ ಪಕ್ಷದ ಸಂಘಟನಾ ಕಾರ್ಯಗಳನ್ನು ಕೈಗೊಳ್ಳೋಣ ಎಂದು ಮಾಜಿ ಶಾಸಕ ಶರಣಪ್ಪ ಸುಣಗಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ