ಬಳ್ಳಾರಿ

ತೆಕ್ಕಲಕೋಟೆ ಸಮುದಾಯ ಆರೋಗ್ಯ ಕೇಂದ್ರದ ಕುರಿತು

ತೆಕ್ಕಲಕೋಟೆ ಸಮುದಾಯ ಆರೋಗ್ಯ ಕೇಂದ್ರದ ಕುರಿತು

ಬಳ್ಳಾರಿ,ಅ.10:  ರುಗುಪ್ಪ ತಾಲೂಕಿನ ತೆಕ್ಕಲಕೋಟೆ ಸಮುದಾಯ ಆರೋಗ್ಯ ಕೇಂದ್ರದ ಹೆರಿಗೆ ವಾರ್ಡ್ನಲ್ಲಿ ಮೂಲಸೌಕರ್ಯಗಳ ಕೊರತೆಯಿದ್ದು, ವಿದ್ಯುತ್ ಕಡಿತಗೊಂಡಾಗ ಮೊಬೈಲ್ ಟಾರ್ಚ್‌ ಬಳಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದ ವರದಿಗೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಸಿರುಗುಪ್ಪ ತಾಲೂಕು ಆರೋಗ್ಯಾಧಿಕಾರಿಗಳು ವರದಿ ಸಲ್ಲಿಸಿದ್ದು, ಅಕ್ಟೋಬರ್ 6ರಂದು ಪಿ.ಎನ್‌.ಸಿ ವಿಭಾಗದಲ್ಲಿ ಸುಮಾರು 20 ನಿಮಿಷಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಿತ್ತು ಎಂದು ತಿಳಿಸಿದ್ದಾರೆ.

ಆಸ್ಪತ್ರೆಯ ಸಿ.ಸಿ.ಟಿ.ವಿ ಪರೀಶೀಲಿಸಿದಾಗ, ದಾಖಲಾಗಿದ್ದ ರೋಗಿಯೊಬ್ಬರ ಸಂಬಂಧಿಕರು ಬ್ಯಾಟರಿ ಸ್ವಿಚ್ ಆಫ್ ಮಾಡಿದ್ದರಿಂದ ಬ್ಯಾಟರಿ ಚಾರ್ಜ್‌ ಆಗದೆ ಈ ತಾತ್ಕಾಲಿಕ ವ್ಯತ್ಯಯ ಉಂಟಾಗಿರುವುದು ಬೆಳಕಿಗೆ ಬಂದಿದೆ. ಆ ಸಂದರ್ಭದಲ್ಲಿ ರೋಗಿಗಳಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಆಸ್ಪತ್ರೆಯಲ್ಲಿ ತುರ್ತು ವಿದ್ಯುತ್ ಪೂರೈಕೆಗಾಗಿ ಈಗಾಗಲೇ 7 ಯು.ಪಿ.ಎಸ್ ಬ್ಯಾಟರಿಗಳು ಹಾಗೂ 62.5 ಕೆವಿ ಜನರೇಟರ್ ವ್ಯವಸ್ಥೆ ಲಭ್ಯವಿದೆ. ಬ್ಯಾಟರಿಗಳು, ಡಿಸ್ಟಿಲ್ಡ್‌ ವಾಟರ್ ಮತ್ತು ಜನರೇಟರ್ ನಿರ್ವಹಣೆ ಕುರಿತು ನಿಗಾ ವಹಿಸಲು ಆಡಳಿತ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಜತೆಗೆ ಸಾರ್ವಜನಿಕರು ಅಥವಾ ರೋಗಿಗಳ ಸಂಬಂಧಿಕರು ಸ್ವಿಚ್ಗಳನ್ನು ಮುಟ್ಟದಂತೆ ಎಚ್ಚರಿಕೆ ಫಲಕ ಅಳವಡಿಸಲು ನಿರ್ದೇಶಿಸಲಾಗಿದೆ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ, ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳಲ್ಲೂ ಜನರೇಟರ್ ವ್ಯವಸ್ಥೆ ಸುಸ್ಥಿತಿಯಲ್ಲಿದ್ದು ರೋಗಿಗಳಿಗೆ ತೊಂದರೆಯಾಗದಂತೆ ಎಚ್ಚರವಹಿಸಲು ಸೂಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಆಯುಕ್ತರಿಗೆ ಸಲ್ಲಿಸಿರುವ ವರದಿಯಲ್ಲಿ ವಿವರಿಸಿದ್ದಾರೆ. 


ಸುದ್ದಿ ಓದಿ